Today Gold Price: ಚಿನ್ನ - ಬೆಳ್ಳಿ ಬೆಲೆ ಇಳಿಕೆ.. ಎಷ್ಟು?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಭಾನುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ.

Nov 16, 2026 - 10:53
Nov 16, 2026 - 10:54
Today Gold Price: ಚಿನ್ನ - ಬೆಳ್ಳಿ ಬೆಲೆ ಇಳಿಕೆ.. ಎಷ್ಟು?

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಭಾನುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.820 ಕಡಿಮೆಯಾಗಿ ರೂ.1,36,800 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.750 ಇಳಿಕೆಯಾಗಿ ರೂ.1,25,400ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.620 ಕಡಿಮೆಯಾಗಿ ರೂ.1,02,600 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.1,90,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ಸಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬಿಎಸ್‌ಇ ಸೆನ್ಸೆಕ್ಸ್ 218.53 ಅಂಕಗಳು ಏರಿಕೆಯಾಗಿ 81,810.98 ಅಂಕಗಳಿಗೆ ತಲುಪಿದೆ. ನಿಫ್ಟಿ 61.85 ಅಂಕಗಳು ಹೆಚ್ಚಳವಾಗಿ 25,206.15 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಏಷ್ಯನ್ ಪೇಂಟ್ಸ್, ಭಾರ್ತಿ ಏರ್‌ಟೆಲ್, ಎಸ್‌ಬಿಐಎನ್, ಟೆಕ್ ಮಹೀಂದ್ರಾ ಹಾಗೂ ಟಿಸಿಎಸ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಟಾಟಾ ಸ್ಟೀಲ್, ಪವರ್ ಗ್ರಿಡ್ ಮತ್ತು ಎನ್‌ಟಿಪಿಸಿ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.