Today Gold Price: ಚಿನ್ನದ ಬೆಲೆ ಮತ್ತೆ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ದರವು ಸ್ಥಿರವಾಗಿದೆ.

Nov 17, 2026 - 11:16
Nov 17, 2026 - 11:16
Today Gold Price: ಚಿನ್ನದ ಬೆಲೆ ಮತ್ತೆ ಇಳಿಕೆ

Today Gold Price: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್ ಸಿಕ್ಕಿದೆ. ಚಿನಿವಾರ ಪೇಟೆಯಲ್ಲಿ ಇಂದು (ಮಂಗಳವಾರ) ಚಿನ್ನದ ದರ ಮತ್ತೆ ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯು ದರವು ಸ್ಥಿರವಾಗಿದೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.760 ಕಡಿಮೆಯಾಗಿ ರೂ.1,36,040 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.700 ಇಳಿಕೆಯಾಗಿ ರೂ.1,24,700ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.570 ಕಡಿಮೆಯಾಗಿ ರೂ.1,02,030 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.1,90,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ಸಕಾರತ್ಮಕ ವಹಿವಾಟು: 

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 400.65 ಅಂಕಗಳು ಏರಿಕೆಯಾಗಿ 82,505.44 ಅಂಕಗಳಿಗೆ ತಲುಪಿದೆ. ನಿಫ್ಟಿ 101.60 ಅಂಕಗಳು ಹೆಚ್ಚಳವಾಗಿ 25,392.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಏಷ್ಯನ್ ಪೇಂಟ್ಸ್, ಇಂಡಿಗೋ ಮತ್ತು ಅದಾನಿ ಪೋರ್ಟ್ಸ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಟೆಕ್ ಮಹೀಂದ್ರಾ, ಹೆಚ್‌ಸಿಎಲ್ ಟೆಕ್ ಹಾಗೂ ಪವರ್ ಗ್ರಿಡ್ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.