Today Gold Price: ಆಭರಣ ಪ್ರಿಯರಿಗೆ ಸಿಹಿಸುದ್ದಿ.. ಚಿನ್ನ & ಬೆಳ್ಳಿ ಬೆಲೆ ಭಾರೀ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿವೆ.

Nov 19, 2026 - 12:10
Nov 19, 2026 - 12:11
Today Gold Price: ಆಭರಣ ಪ್ರಿಯರಿಗೆ ಸಿಹಿಸುದ್ದಿ.. ಚಿನ್ನ & ಬೆಳ್ಳಿ ಬೆಲೆ ಭಾರೀ ಇಳಿಕೆ

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿವೆ.

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,570 ಕಡಿಮೆಯಾಗಿ ರೂ.1,30,690 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,350 ಇಳಿಕೆಯಾಗಿ ರೂ.1,19,800ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,920 ಕಡಿಮೆಯಾಗಿ ರೂ.98,020 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.1,80,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.  

ಷೇರುಪೇಟೆ: ಸೆನ್ಸೆಕ್ಸ್ ಏರಿಕೆ

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಬೆಳಗ್ಗೆ 11:21 ಗಂಟೆ ಸುಮಾರಿಗೆ ಸೆನ್ಸೆಕ್ಸ್ 240 ಅಂಕಗಳು ಏರಿಕೆಯಾಗಿ 82,272 ಅಂಕಗಳಿಗೆ ತಲುಪಿದೆ. ನಿಫ್ಟಿ 77 ಅಂಕಗಳು ಹೆಚ್ಚಳವಾಗಿ 25,305 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯವು ಸ್ಥಿರವಾಗಿದ್ದು, ರೂ.93.44 ಇದೆ. ಬುಧವಾರದಂದು ಡಾಲರ್‌ಗೆ ರೂ.93.45 ಇತ್ತು.

ಮಾರುತಿ ಸುಜುಕಿ, ಟಾಟಾ ಮೋಟಾರ್ಸ್ ಪ್ಯಾಸೆಂಜರ್ ವೆಹಿಕಲ್ಸ್ ಮತ್ತು ಎಂ&ಎಂ ಷೇರುಗಳು ಲಾಭದಲ್ಲಿವೆ. ಇನ್ಫೋಸಿಸ್, ಟೆಕ್ ಮಹೀಂದ್ರಾ ಮತ್ತು ಹೆಚ್‌ಸಿಎಲ್‌ ಟೆಕ್ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.