Today Gold Price: ಇಂದು ಆಭರಣದ ಬೆಲೆ ಇಳಿಕೆ.. ಎಷ್ಟು?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ.

Nov 13, 2026 - 11:53
Nov 13, 2026 - 11:56
Today Gold Price: ಇಂದು ಆಭರಣದ ಬೆಲೆ ಇಳಿಕೆ.. ಎಷ್ಟು?

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ. 
 
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,310 ಇಳಿಕೆಯಾಗಿ ರೂ.1,38,490 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,200 ಕಡಿಮೆಯಾಗಿ ರೂ.1,33,850ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.980 ಇಳಿಕೆಯಾಗಿ ರೂ.1,03,870 ಆಗಿದೆ.  
 
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ಅತ್ಯಲ್ಪ ರೂ.1,99,900 ಕಡಿಮೆಯಾಗಿ ರೂ.2,10,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
 
ಷೇರುಪೇಟೆ: ನಕಾರತ್ಮಕ ವಹಿವಾಟು 
 
ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಬೆಳಗ್ಗೆ 11:26ರ ಸುಮಾರಿಗೆ, ಸೆನ್ಸೆಕ್ಸ್ 261 ಅಂಕಗಳು ಅಥವಾ ಶೇಕಡ 0.32% ಇಳಿದು 81,650 ಅಂಕಗಳಿಗೆ ತಲುಪಿದೆ. ನಿಫ್ಟಿ 122 ಅಂಕಗಳು ಅಥವಾ ಶೇಕಡ 0.48 ಕುಸಿದು 25,177 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅಮೆರಿಕ ಡಾಲರ್ ಎದುರು ರೂಪಾಯಿ ಮೌಲ್ಯವು 94.04 ಇದೆ. 
 
ಬಜಾಜ್ ಫೈನಾನ್ಸ್, ಎಸ್‌ಬಿಐಎನ್, ಬಿಇಎಲ್, ಬಜಾಜ್ ಫಿನ್‌ಸರ್ವ್ ಮತ್ತು ಐಸಿಐಸಿಐ ಬ್ಯಾಂಕ್ ಷೇರುಗಳು ಲಾಭದಲ್ಲಿವೆ. ಮತ್ತೊಂದೆಡೆ, ಹಿಂದೂಸ್ತಾನ್ ಯೂನಿಲಿವರ್, ಮಾರುತಿ, ಪವರ್ ಗ್ರಿಡ್, ಟಿಸಿಎಸ್ ಮತ್ತು ಎಂ&ಎಂ ಷೇರುಗಳು ನಷ್ಟದಲ್ಲಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.