Today Gold Price: ಇಂದು ಚಿನ್ನ - ಬೆಳ್ಳಿ ದರ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ.
Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.330 ಕಡಿಮೆಯಾಗಿ ರೂ.1,49,240 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.300 ಇಳಿಕೆಯಾಗಿ ರೂ.1,36,800ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.250 ಕಡಿಮೆಯಾಗಿ ರೂ.1,11,930 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.2,35,000 ದರದಲ್ಲಿ ಗ್ರಾಹಕರ ಖರೀದಿಗೆ ಸಿಗಲಿದೆ.
ಷೇರುಪೇಟೆ: ನಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 21.49 ಅಂಕಗಳು ಅಥವಾ ಶೇ.0.03% ಕುಸಿದು 72,458.80ಕ್ಕೆ ತಲುಪಿದೆ. ನಿಫ್ಟಿ 46.40 ಅಂಕಗಳು ಅಥವಾ ಶೇ. 0.21% ಇಳಿದು 22,574.05 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಸ್ವಲ್ಪ ಮಟ್ಟಿಗೆ ಕುಸಿದಿದ್ದು, ರೂ.95.95 ಇದೆ.