Today Gold Price: ಇಂದು ಬಂಗಾರದ ಬೆಲೆ ಭಾರೀ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ), ಚಿನ್ನ ಹಾಗೂ ಬೆಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ), ಚಿನ್ನ ಹಾಗೂ ಬೆಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,620 ಕಡಿಮೆಯಾಗಿ ರೂ.1,52,890 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.2,400 ಇಳಿಕೆಯಾಗಿ ರೂ.1,40,150ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,960 ಕಡಿಮೆಯಾಗಿ ರೂ.1,14,670 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.10,000 ಇಳಿಕೆಯಾಗಿ ರೂ.2,45,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ನಕಾರತ್ಮಕ ವಹಿವಾಟು
ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 593.43 ಅಂಕಗಳು ಕುಸಿತವಾಗಿ 74,309.16 ಅಂಕಗಳಿಗೆ ತಲುಪಿದೆ. ನಿಫ್ಟಿ 207.50 ಅಂಕಗಳು ಇಳಿಕೆಯಾಗಿ 23,270.30 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಹೆಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ, ಇನ್ಫೋಸಿಸ್, ಟಿಸಿಎಸ್ ಹಾಗೂ ಅದಾನಿ ಪೋರ್ಟ್ಸ್ ಷೇರುಗಳು ಲಾಭದಲ್ಲಿವೆ. ಇಂಡಿಗೋ, ಟಾಟಾ ಸ್ಟೀಲ್, ಬಜಾಜ್ ಫೈನಾನ್ಸ್, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಆಕ್ಸಿಸ್ ಬ್ಯಾಂಕ್ ಷೇರುಗಳು ನಷ್ಟದಲ್ಲಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.