Today Gold Price: ಇಂದು ಚಿನ್ನ - ಬೆಳ್ಳಿ ಬೆಲೆ ಏರಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿಗಳು ಏರಿಕೆಯಾಗಿವೆ.

Sep 18, 2026 - 11:33
Today Gold Price: ಇಂದು ಚಿನ್ನ - ಬೆಳ್ಳಿ ಬೆಲೆ ಏರಿಕೆ

Today Gold Price: ಆಭರಣ ಪ್ರಿಯರ ಜೇಬಿಗೆ ಕತ್ತರಿ ಬಿದ್ದಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನ ಹಾಗೂ ಬೆಳ್ಳಿಗಳು ಏರಿಕೆಯಾಗಿವೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,580 ಹೆಚ್ಚಳವಾಗಿ ರೂ.1,54,420 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,450 ಏರಿಕೆಯಾಗಿ ರೂ.1,41,550ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,140 ಹೆಚ್ಚಳವಾಗಿ ರೂ.1,15,820 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಏರಿಕೆಯಾಗಿ ರೂ.2,50,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ಸಕಾರತ್ಮಕ ವಹಿವಾಟು: 

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 260.65 ಅಂಕಗಳು ಏರಿಕೆಯಾಗಿ 74,575.24 ಅಂಕಗಳಿಗೆ ತಲುಪಿದೆ. ನಿಫ್ಟಿ 64.10 ಅಂಕಗಳು ಹೆಚ್ಚಳವಾಗಿ 23,334.70 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.

ಎಲ್&ಟಿ, ಇಂಡಿಗೋ, ಎಟರ್ನಲ್, ಭಾರ್ತಿ ಏರ್‌ಟೆಲ್ ಹಾಗೂ ಏಷ್ಯನ್ ಪೇಂಟ್ಸ್ ಷೇರುಗಳು ಲಾಭದಲ್ಲಿವೆ. ಟಿಸಿಎಸ್, ಇನ್ಫೋಸಿಸ್, ಟೆಕ್ ಮಹೀಂದ್ರಾ, ಹೆಚ್‌ಸಿಎಲ್ ಟೆಕ್ ಮತ್ತು ಟಾಟಾ ಸ್ಟೀಲ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.