Today Gold Price: ಇಂದು ಆಭರಣದ ಬೆಲೆ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ.

Sep 21, 2026 - 12:54
Today Gold Price: ಇಂದು ಆಭರಣದ ಬೆಲೆ ಇಳಿಕೆ

Today Gold Price: ಆಭರಣ ಪ್ರಿಯರಿಗೆ ನೆಮ್ಮದಿ ಸುದ್ದಿಯೊಂದು ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನ ಹಾಗೂ ಬೆಳ್ಳಿ ಬೆಲೆಗಳು ಇಳಿಕೆಯಾಗಿವೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.160 ಕಡಿಮೆಯಾಗಿ ರೂ.1,55,680 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.150 ಇಳಿಕೆಯಾಗಿ ರೂ.1,42,700ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.120 ಕಡಿಮೆಯಾಗಿ ರೂ.1,16,760 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.2,50,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ಸಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ವಹಿವಾಟು ಇಂದು ಸಕಾರತ್ಮಕವಾಗಿದೆ. ಸೆನ್ಸೆಕ್ಸ್ 240.22 ಅಂಕಗಳು ಏರಿಕೆಯಾಗಿ 74,535.18 ಅಂಕಗಳಿಗೆ ತಲುಪಿದೆ. ನಿಫ್ಟಿ 16.20 ಅಂಕಗಳು ಹೆಚ್ಚಳವಾಗಿ 23,330.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಅಲ್ಟ್ರಾಟೆಕ್ ಸಿಮೆಂಟ್, ಏಷ್ಯನ್ ಪೇಂಟ್ಸ್, ಟ್ರೆಂಟ್, ಟೈಟಾನ್ ಹಾಗೂ ಬಜಾಜ್ ಫೈನಾನ್ಸ್ ಷೇರುಗಳು ಲಾಭದಲ್ಲಿವೆ. ಪವರ್ ಗ್ರಿಡ್, ಇನ್ಫೋಸಿಸ್, ಭಾರ್ತಿ ಏರ್‌ಟೆಲ್, ಮಾರುತಿ ಸುಜುಕಿ ಹಾಗೂ ಟಿಸಿಎಸ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ಟಿಜಿ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.