Today Gold Price: ಇಂದು ಬಂಗಾರದ ಬೆಲೆ ಇಳಿಕೆ.. ಎಷ್ಟು?
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ, ಬೆಳ್ಳಿ ಹಾಗೂ ಪ್ಲಾಟಿನಂ ಬೆಲೆಯೂ ಇಳಿಕೆಯಾಗಿದೆ.
Today Gold Price: ಶ್ರಾವಣ ಮಾಸದಲ್ಲಿ ಚಿನ್ನಾಭರಣ ಖರೀದಿಸುವವರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ, ಬೆಳ್ಳಿ ಹಾಗೂ ಪ್ಲಾಟಿನಂ ಬೆಲೆಯೂ ಇಳಿಕೆಯಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.2,070 ಕಡಿಮೆಯಾಗಿ ರೂ.1,52,020 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,900 ಇಳಿಕೆಯಾಗಿ ರೂ.1,39,350ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,550 ಕಡಿಮೆಯಾಗಿ ರೂ.1,14,020 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ಬೆಲೆ ರೂ.5,000 ಕಡಿಮೆಯಾಗಿ ರೂ.2,45,000ಕ್ಕೆ ಮುಟ್ಟಿದೆ. 10 ಗ್ರಾಂ ಪ್ಲಾಟಿನಂ ದರ ರೂ.2,360 ಇಳಿಕೆಯಾಗಿ ರೂ.52,530 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ಆರಂಭಿಕ ವಹಿವಾಟು ಕುಸಿತ:
ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಇಂದು ಕುಸಿತವಾಗಿದೆ. ಬೆಳಗ್ಗೆ 9:44ರ ಸುಮಾರಿಗೆ ಸೆನ್ಸೆಕ್ಸ್ 603.69 ಅಂಕಗಳು ಅಥವಾ ಶೇಕಡ 0.78% ಇಳಿದು 76,340.59 ಅಂಕಗಳಿಗೆ ಬಂದಿದೆ. ನಿಫ್ಟಿ 213.40 ಅಂಕಗಳು ಅಥವಾ ಶೇಕಡ 0.89% ಕುಸಿದು 23,842.40 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.