Today Gold Price: ಇಂದು ಚಿನ್ನ & ಬೆಳ್ಳಿ ದರ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ದರಗಳು ಇಳಿಕೆಯಾಗಿವೆ.

Sep 24, 2026 - 11:03
Today Gold Price: ಇಂದು ಚಿನ್ನ & ಬೆಳ್ಳಿ ದರ ಇಳಿಕೆ

Today Gold Price: ಆಭರಣ ಪ್ರಿಯರಿಗೆ ಭರ್ಜರಿ ಸಿಹಿಸುದ್ದಿ ಲಭ್ಯವಾಗಿದೆ. ಚಿನಿವಾರ ಪೇಟೆಯಲ್ಲಿ ಇಂದು (ಗುರುವಾರ) ಚಿನ್ನ ಹಾಗೂ ಬೆಳ್ಳಿ ದರಗಳು ಇಳಿಕೆಯಾಗಿವೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,520 ಕಡಿಮೆಯಾಗಿ ರೂ.1,52,680 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,400 ಇಳಿಕೆಯಾಗಿ ರೂ.1,39,950ಕ್ಕೆ ಬಂದಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,140 ಕಡಿಮೆಯಾಗಿ ರೂ.1,14,510 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.5,000 ಇಳಿಕೆಯಾಗಿ ರೂ.2,45,000 ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗಿದೆ. 

ಷೇರುಪೆಟೆ: ಇಂದು ನಕಾರತ್ಮಕ ವಹಿವಾಟು

ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಇಂದು ನಕಾರತ್ಮಕವಾಗಿದೆ. ಸೆನ್ಸೆಕ್ಸ್ 555.85 ಅಂಕಗಳು ಇಳಿಕೆಯಾಗಿ 74,272.40 ಅಂಕಗಳಿಗೆ ತಲುಪಿದೆ. ನಿಫ್ಟಿ 225 ಅಂಕಗಳು ಕುಸಿತವಾಗಿ 23,221.80 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.  

ಹೆಚ್‌ಸಿಎಲ್ ಟೆಕ್, ಭಾರತಿ ಏರ್‌ಟೆಲ್, ಎನ್‌ಟಿಪಿಸಿ ಹಾಗೂ ಇನ್ಫೋಸಿಸ್ ಷೇರುಗಳು ಲಾಭದಲ್ಲಿವೆ. ಬಜಾಜ್ ಫೈನಾನ್ಸ್, ಇಂಡಿಗೋ, ಆಕ್ಸಿಸ್ ಬ್ಯಾಂಕ್, ಹೆಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಬಜಾಜ್ ಫಿನ್‌ಸರ್ವ್ ಷೇರುಗಳು ನಷ್ಟದಲ್ಲಿವೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.