Today Gold Price: ಇಂದು ಚಿನ್ನದ ದರ ಏರಿಕೆ.. ಎಷ್ಟಾಗಿದೆ?

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರವು ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.

Sep 4, 2026 - 11:44
Today Gold Price: ಇಂದು ಚಿನ್ನದ ದರ ಏರಿಕೆ.. ಎಷ್ಟಾಗಿದೆ?

Today Gold Price: ಬಂಗಾರ ಖರೀದಿಸಲು ಪ್ಲ್ಯಾನ್ ಮಾಡುತ್ತಿರುವವರ ಜೇಬಿಗೆ ಕತ್ತರಿ ಬಿದ್ದಿದೆ. ಚಿನಿವಾರ ಪೇಟೆಯಲ್ಲಿ ಇಂದು (ಶುಕ್ರವಾರ) ಚಿನ್ನದ ದರವು ಏರಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,310 ಹೆಚ್ಚಳವಾಗಿ, ರೂ.1,56,660 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.1,200 ಏರಿಕೆಯಾಗಿ ರೂ.1,43,600ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.980 ಹೆಚ್ಚಳವಾಗಿ, ರೂ.1,17,490 ಆಗಿದೆ.

ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,50,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 

ಷೇರುಪೇಟೆ: ಸಕಾರತ್ಮಕ ವಹಿವಾಟು:

ಭಾರತದ ಷೇರುಪೇಟೆ ವಹಿವಾಟು ಸಕಾರತ್ಮಕವಾಗಿದೆ. ಬೆಳಗ್ಗೆ 10:54ರ ಸುಮಾರಿಗೆ ಸೆನ್ಸೆಕ್ಸ್ 558.71 ಅಂಕಗಳು ಅಥವಾ ಶೇಕಡ 0.73% ಏರಿಕೆಯಾಗಿ 76,711.57 ಅಂಕಗಳಿಗೆ ತಲುಪಿದೆ. ನಿಫ್ಟಿ 85.10 ಅಂಕಗಳು ಅಥವಾ ಶೇಕಡ 0.36 ಹೆಚ್ಚಳವಾಗಿ 23,958.55 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಬಜಾಜ್ ಫಿನ್‌ಸರ್ವ್, ಹೆಚ್‌ಸಿಎಲ್ ಟೆಕ್, ಅಲ್ಟ್ರಾಟೆಕ್ ಸಿಮೆಂಟ್, ಮಾರುತಿ ಸುಜುಕಿ ಹಾಗೂ ಏಷ್ಯನ್ ಪೇಂಟ್ಸ್ ಷೇರುಗಳು ಲಾಭದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.