Today Gold Price: ಇಂದು ಚಿನ್ನದ ದರ ಅತ್ಯಲ್ಪ ಇಳಿಕೆ
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರವು ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಸೋಮವಾರ) ಚಿನ್ನದ ದರವು ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ.
ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.650 ಕಡಿಮೆಯಾಗಿ ರೂ.1,54,150 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.600 ಇಳಿಕೆಯಾಗಿ ರೂ.1,41,300ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.490 ಕಡಿಮೆಯಾಗಿ ರೂ.1,15,610 ಆಗಿದೆ.
ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,50,000 ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ.
ಷೇರುಪೇಟೆ: ಆರಂಭಿಕ ವಹಿವಾಟು ಕುಸಿತ:
ಭಾರತದ ಷೇರುಪೇಟೆ ಆರಂಭಿಕ ವಹಿವಾಟು ಅಲ್ಪ ಮಟ್ಟಿಗೆ ಇಳಿಕೆಯಾಗಿದೆ. ಬೆಳಗ್ಗೆ 10:05 ಗಂಟೆಗಳಲ್ಲಿ ಸೆನ್ಸೆಕ್ಸ್ 266.03 ಅಂಕಗಳು ಅಥವಾ ಶೇಕಡ 0.35% ಕುಸಿತವಾಗಿ 76,249.40 ಅಂಕಗಳಿಗೆ ಬಂದಿದೆ. ನಿಫ್ಟಿ 77.90 ಅಂಕಗಳು ಅಥವಾ ಶೇಕಡ 0.33% ಇಳಿಕೆಯಾಗಿ 23,819.80 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಬಿಇಎಲ್, ಎಟರ್ನಲ್, ಬಜಾಜ್ ಫೈನಾನ್ಸ್, ಭಾರ್ತಿ ಏರ್‌ಟೆಲ್ ಹಾಗೂ ಅದಾನಿ ಪೋರ್ಟ್ಸ್ ಷೇರುಗಳು ಲಾಭದಲ್ಲಿವೆ. ಇನ್ಫೋಸಿಸ್, ಹೆಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ, ಟಿಸಿಎಸ್ ಮತ್ತು ಹಿಂದೂಸ್ತಾನ್ ಯೂನಿಲಿವರ್ ಷೇರುಗಳು ನಷ್ಟದಲ್ಲಿವೆ.