Today Gold Price: ಇಂದು ಚಿನ್ನದ ಬೆಲೆ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರವು ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆಯೂ ಸ್ಥಿರವಾಗಿದೆ.

Sep 9, 2026 - 10:28
Today Gold Price: ಇಂದು ಚಿನ್ನದ ಬೆಲೆ ಇಳಿಕೆ

Today Gold Price: ಚಿನಿವಾರ ಪೇಟೆಯಲ್ಲಿ ಇಂದು (ಬುಧವಾರ) ಚಿನ್ನದ ದರವು ಇಳಿಕೆಯಾಗಿದೆ. ಆದಾಗ್ಯೂ ಬೆಳ್ಳಿ ಬೆಲೆ ಮಾತ್ರ ಸ್ಥಿರವಾಗಿದೆ. 

ರಾಜ್ಯದಲ್ಲಿ (ಬೆಂಗಳೂರು) 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.1,040 ಕಡಿಮೆಯಾಗಿ ರೂ.1,54,310 ಇದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ ರೂ.950 ಇಳಿಕೆಯಾಗಿ ರೂ.1,41,450ಕ್ಕೆ ತಲುಪಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ.780 ಕಡಿಮೆಯಾಗಿ ರೂ.1,15,730 ಆಗಿದೆ. ಅದೇ ರೀತಿಯಲ್ಲಿ 1 ಕೆಜಿ ಬೆಳ್ಳಿ ರೂ.2,50,000 ಬೆಲೆಯಲ್ಲಿ ಮಾರಾಟವಾಗುತ್ತಿದೆ. 

ಷೇರುಪೇಟೆ: ವಹಿವಾಟು ಕುಸಿತ:

ಬೆಳಗ್ಗೆ 9:30ರ ಸುಮಾರಿಗೆ ಸೆನ್ಸೆಕ್ಸ್ 510.89 ಅಂಕಗಳು ಅಥವಾ ಶೇಕಡ 0.7% ಇಳಿಕೆಯಾಗಿ 75,066.69 ಅಂಕಗಳಿಗೆ ತಲುಪಿದೆ. ನಿಫ್ಟಿ 120.85 ಅಂಕಗಳು ಅಥವಾ ಶೇಕಡ 0.5% ಕಡಿಮೆಯಾಗಿ 23,514.25 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. 

ಸನ್ ಫಾರ್ಮಾ, ಅದಾನಿ ಪೋರ್ಟ್ಸ್, ಟಾಟಾ ಸ್ಟೀಲ್, ಟ್ರೆಂಟ್ ಹಾಗೂ ಬಿಇಎಲ್ ಷೇರುಗಳು ಲಾಭದಲ್ಲಿವೆ. ಇನ್ಫೋಸಿಸ್, ಹೆಚ್‌ಸಿಎಲ್ ಟೆಕ್, ಟೆಕ್ ಮಹೀಂದ್ರಾ, ಇಂಡಿಗೊ ಮತ್ತು ಬಜಾಜ್ ಫೈನಾನ್ಸ್ ಷೇರುಗಳು ನಷ್ಟದಲ್ಲಿವೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.