ODI: ಇಂದು ಭಾರತ - ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ

Today India England 1st ODI Match: ಭಾರತ ತಂಡವು ಇಂಗ್ಲೆಂಡ್ ಪ್ರವಾಸದಲ್ಲಿದೆ. ಇಂದಿನಿಂದ (ಜು.14) 3 ಪಂದ್ಯಗಳ ಏಕದಿನ ಸರಣಿಯು ಶುರುವಾಗಲಿದೆ.

Jul 14, 2026 - 10:44
ODI: ಇಂದು ಭಾರತ - ಇಂಗ್ಲೆಂಡ್ ಮೊದಲ ಏಕದಿನ ಪಂದ್ಯ

ಲಂಡನ್: ಭಾರತ ತಂಡವು ಇಂಗ್ಲೆಂಡ್ ಪ್ರವಾಸದಲ್ಲಿದೆ. ಇಂದಿನಿಂದ (ಜು.14) 3 ಪಂದ್ಯಗಳ ಏಕದಿನ ಸರಣಿಯು ಶುರುವಾಗಲಿದೆ. ಈಚೆಗೆ ಮುಕ್ತಾಯಗೊಂಡ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತವು 0-4 ಅಂತರದರಲ್ಲಿ ಹೀನಾಯವಾಗಿ ಸೋಲು ಕಂಡಿತ್ತು. ಏಕದಿನ ಸರಣಿ ಗೆದ್ದು, ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದೆ. 

ಸದ್ಯ ಬರ್ಮಿಂಗ್‌ಹ್ಯಾಮ್‌ನ ಎಡ್‌ಬಾಸ್ಟನ್ ಕ್ರೀಡಾಂಗಣದಲ್ಲಿ ಮೊದಲ ಏಕದಿನವು ಆಯೋಜನೆಗೊಂಡಿದ್ದು, ಮ.3:30ಕ್ಕೆ ಶುರುವಾಗಲಿದೆ. ಟೀಮ್ ಇಂಡಿಯಾಗೆ ಶುಭ್‌ಮನ್ ಗಿಲ್ ನಾಯಕರಾಗಿದ್ದಾರೆ. ಸ್ಟಾರ್ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಹಿಂದಿರುಗಿದ್ದಾರೆ.

ಸಂಭಾವ್ಯ ಪ್ಲೇಯಿಂಗ್ 11: 

ಭಾರತ: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್.ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಅರ್ಶ್‌ದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್: ಜೇಕಬ್ ಬೆಥೆಲ್, ಬೆನ್ ಡಕೆಟ್, ಜೋ ರೂಟ್, ಹ್ಯಾರಿ ಬ್ರೂಕ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಸ್ಯಾಮ್ ಕರನ್, ವಿಲ್ ಜಾಕ್ಸ್, ಜೋಫ್ರಾ ಆರ್ಚರ್, ಲಿಯಾಮ್ ಡಾಸನ್, ಜೋಶ್ ಟಂಗ್ ಹಾಗೂ ಆದಿಲ್ ರಶೀದ್.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.