Karnataka Cabinet Meeting: ಕಡಲನಗರಿ ಮಂಗಳೂರಿನಲ್ಲಿ ಇನ್ನೇನು ಸಚಿವ ಸಂಪುಟ ಸಭೆ ಆರಂಭಕ್ಕೆ ಕ್ಷಣಗಣನೆ
Karnataka Cabinet Meeting: ಮಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಸಚಿವ ಸಂಪುಟ ಸಭೆ ನಡೆಯುತ್ತಿದ್ದು, ಇಂದು ಬೆಳಗ್ಗೆ 10 ಗಂಟೆಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಸಭೆ ಆರಂಭವಾಗಲಿದೆ.
ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಸಚಿವ ಸಂಪುಟ ಸಭೆಗೆ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಬೆಳಗ್ಗೆ 10 ಗಂಟೆಗೆ ಡಿಸಿ ಕಚೇರಿ ಸಭಾಂಗಣದಲ್ಲಿ ಸಭೆ ಆರಂಭವಾಗಲಿದೆ.
ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar), ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ (Dr.G.Parameshwara) ಸೇರಿ ಇಡೀ ಆಡಳಿತ ಯಂತ್ರ ಕಡಲನಗರಿಗೆ ಆಗಮಿಸಿದೆ.
ತುಳು ಭಾಷೆಗೆ ರಾಜ್ಯಭಾಷೆ ಸ್ಥಾನಮಾನ ನೀಡುವುದು. ದಕ್ಷಿಣ ಕನ್ನಡ ಜಿಲ್ಲೆಯನ್ನು 'ಮಂಗಳೂರು' ಎಂದು ಮರುನಾಮಕರಣ ಮಾಡುವುದು. ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ರೂಪ ಕೊಡುವುದು. ಕಸ್ತೂರಿ ರಂಗನ್ ವರದಿ ಜಾರಿಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ.

ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿದ ಮೀನುಗಾರಿಕೆ, ಪ್ರವಾಸೋದ್ಯಮ, ಕಂದಾಯ ಭೂಮಿ, ಪಿಲಿಕುಳ ಮತ್ತು ಕೋಸ್ಟಲ್ ರೋಡ್ ಸೇರಿದಂತೆ 35ಕ್ಕೂ ಹೆಚ್ಚು ಅಭಿವೃದ್ಧಿ ಯೋಜನೆಗಳ ಕುರಿತಾಗಿಯೂ ಚರ್ಚೆಯಾಗುವ ನಿರೀಕ್ಷೆಯಿದೆ.
ಸಚಿವ ಸಂಪುಟ ಸಭೆ ಕುರಿತು ಸ್ವತಃ ಸಿಎಂ ಡಿಕೆಶಿ ಅವರೇ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ನಮಸ್ಕಾರ ಕುಡ್ಲ! ಕರಾವಳಿಯ ಸರ್ವತೋಮುಖ ಬೆಳವಣಿಗೆ ಮತ್ತು ಸ್ಥಳೀಯ ಜನರ ಆಶೋತ್ತರಗಳನ್ನು ಈಡೇರಿಸಲು ಸರ್ಕಾರವೇ ನೇರವಾಗಿ ಮಂಗಳೂರಿಗೆ ಬರುತ್ತಿದೆ. ಇಂದು ನಡೆಯಲಿರುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯು ಕರಾವಳಿಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿ ಹೊಸ ಮುನ್ನುಡಿ ಬರೆಯಲಿದೆ' ಎಂದು ಬರೆದುಕೊಂಡಿದ್ದಾರೆ.
ಸಂಚಾರ ಮಾರ್ಗ ಬದಲಾವಣೆ:
ಮಂಗಳೂರಿನಲ್ಲಿ ಗಣ್ಯರ ಸಂಚಾರದ ಹಿನ್ನೆಲೆ, ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಬದ್ರಿಯಾ ಜಂಕ್ಷನ್‌ನಿಂದ ಹ್ಯಾಮಿಲ್ಟನ್ ಜಂಕ್ಷನ್‌ಗೆ ತೆರಳುವ ವಾಹನಗಳು ನಿಲೇಶ್ವರ ರಸ್ತೆ-ರೋಸಾರಿಯೋ ರಸ್ತೆ ಬಳಸಬೇಕು. ಹ್ಯಾಮಿಲ್ಟನ್ ಜಂಕ್ಷನ್‌ನಿಂದ ಬದ್ರಿಯಾ ಜಂಕ್ಷನ್‌ಗೆ ತೆರಳುವ ವಾಹನಗಳು ನೆಲ್ಲಿಕಾಯಿ ರಸ್ತೆ ಮೂಲಕ ಸಂಚರಿಸಬೇಕು.
ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯ ನಿರ್ದೇಶನಗಳನ್ನು ಪಾಲಿಸಿ, ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಮನವಿ ಮಾಡಲಾಗಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.