Rain Alert: ರಾಜ್ಯದಲ್ಲಿ ಮುಂದಿನ 7 ದಿನ ಮಳೆ

Rain Alert: ರಾಜ್ಯದಾದ್ಯಂತ ಮುಂದಿನ 7 ದಿನ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.

Aug 5, 2026 - 09:22
Aug 5, 2026 - 09:26
Rain Alert: ರಾಜ್ಯದಲ್ಲಿ ಮುಂದಿನ 7 ದಿನ ಮಳೆ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 7 ದಿನ ಗುಡುಗು-ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 7 ರವರೆಗೆ ಭಾರೀ ಮಳೆಯಾಗಲಿದೆ ಎಂದು  ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಇಂದು, ಆಗಸ್ಟ್ 4 ಮಂಗಳವಾರದಂದು ಬೆಳಗ್ಗೆ 08.30 ರಿಂದ ಆಗಸ್ಟ್ 7 ಗಂಟೆವರೆಗೆ 50 ಮಿಮೀಗಿಂತ ಹೆಚ್ಚು ಮಳೆಯಾದ  ಪ್ರದೇಶಗಳ ವಿವರವನ್ನು ಪ್ರಕಟಿಸಿದೆ. 

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಅತಿ ಹೆಚ್ಚು ಮಳೆಗೆಗೆ ಸಾಕ್ಷಿಯಾಗಿದೆ. 180 ಮಿಮೀ ಮಳೆಯಾಗಿದೆ. ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನಲ್ಲಿ 143 ಮಿಮೀ ಮಳೆ ಪ್ರಮಾಣ ದಾಖಲಾಗಿದೆ. 

ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಠ 29 ಮತ್ತು ಕನಿಷ್ಠ  21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣದೊಂದಿಗೆ ಲಘು ಮಳೆಯಾಗುವ ಸಾಧ್ಯತೆಯಿದೆ. 

ಕೇರಳದಲ್ಲಿ ಭಾರೀ ಮಳೆ: 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ:

ಕೇರಳದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಆಗಸ್ಟ್ 8 ರವರೆಗೆ ಮುಂದುವರಿಯಲಿದೆ. ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ಕೋಝಿಕ್ಕೋಡ್, ವಯನಾಡು, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.