Karnataka Weather Report: ರಾಜ್ಯ ಹವಾಮಾನ ವರದಿ.. ಎಲ್ಲಿ ಮಳೆ?
Karnataka Weather Report: ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದ್ದು, ಮಧ್ಯಾಹ್ನದ ನಂತರ ಕೆಲವೆಡೆ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ.
ರಾಜ್ಯದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯವಾಗಿರಲಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಮುಂದುವರಿಯಬಹುದು.
ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆ, ಸೆಪ್ಟೆಂಬರ್ 19 ರಿಂದ ಕರ್ನಾಟಕದಾದ್ಯಂತ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ನೀರಿಕ್ಷೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಂಜೆ/ ರಾತ್ರಿ ವೇಳೆಗೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ದೇಶದ ವಿವಿಧ ಭಾಗಗಳಲ್ಲೂ ಮಳೆ ಸಾಧ್ಯತೆ:
ಭಾರತದ ನಾನಾ ಭಾಗಗಳಲ್ಲಿಯೂ ವ್ಯಾಪಕ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ಮತ್ತು ಉತ್ತರಾಖಂಡದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಅದೇ ರೀತಿಯಲ್ಲಿ ಅಂಡಮಾನ್ & ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಕೇರಳ, ಪಶ್ಚಿಮ ಬಂಗಾಳ, ತಮಿಳುನಾಡು, ಪುದುಚೇರಿಯ ವಿವಿಧೆಡೆಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.