Karnataka Weather: ರಾಜ್ಯ ಹವಾಮಾನ ವರದಿ.. ಇಂದು ಮಳೆ ಇದ್ಯಾ?
Karnataka Weather: ರಾಜ್ಯದಲ್ಲಿ ಬಿಸಿಲಿನ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬಿಸಿಲು ಹಾಗೂ ಕೆಲವೆಡೆ ಮೋಡ ಕವಿದ ವಾತಾವರಣವಿರುವ ಸಾಧ್ಯತೆಯಿದೆ. ಒಳನಾಡಿನ ಬಹುತೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಕರಾವಳಿ & ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ, ಹಗುರದಿಂದ ಸಾಧಾರಣ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಂಭವವಿದೆ.
ರಾಜಧಾನಿ ಬೆಂಗಳೂರಿನಲ್ಲಿ ನಗರದಲ್ಲಿ ಗರಿಷ್ಠ 32 ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ಆಕಾಶವಿರಲಿದೆ.
ನವದೆಹಲಿಯಲ್ಲಿಂದು ಗರಿಷ್ಠ 32 ಹಾಗೂ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣವಿರಲಿದೆ. ಮುಂಬೈನಲ್ಲಿ ಗರಿಷ್ಠ 35 ಮತ್ತು ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಹಾಗೆಯೇ ಶುಭ್ರ ಆಕಾಶವಿರಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.