Karnataka Weather: ರಾಜ್ಯ ಹವಾಮಾನ ವರದಿ.. ಮಳೆ ಇದ್ಯಾ?

Karnataka Weather: ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆಯಿದೆ.

Oct 12, 2026 - 10:54
Karnataka Weather: ರಾಜ್ಯ ಹವಾಮಾನ ವರದಿ.. ಮಳೆ ಇದ್ಯಾ?

ಬೆಂಗಳೂರು: ಕರ್ನಾಟಕದಾದ್ಯಂತ ಮುಂದಿನ 7 ದಿನಗಳ ಕಾಲ ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಂಭವವಿದೆ. 
 
ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ ಅಲ್ಲಲ್ಲಿ ಹಗುರದಿಂದ ಸಾದಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ನಿರೀಕ್ಷೆಯಿದೆ. 
 
ಬೆಂಗಳೂರು ನಗರದಲ್ಲಿಂದು ಗರಿಷ್ಠ 31 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ವಾತಾವರಣ ಮುಂದುವರಿಲಿದೆ. ಹಾಗೆಯೇ ಆಗುಂಬೆಯಲ್ಲಿ ಸಾಮಾನ್ಯ ಮೋಡ ಕವಿದ ಆಕಾಶವಿರಲಿದ್ದು, ಸಾಧಾರಣ ಮಳೆಯಾಗಲಿದೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.