Karnataka Weather: ರಾಜ್ಯದಲ್ಲಿ ಇಂದು ಬಿಸಿಲಿನ ವಾತಾವರಣ ಮುಂದುವರಿಕೆ
Karnataka Weather: ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆಯಿದೆ.
ಬೆಂಗಳೂರು: ಕರ್ನಾಟಕದಾದ್ಯಂತ ಇಂದು ಬಿಸಿಲಿನ ವಾತಾವರಣ ಕಂಡುಬರುವ ಸಾಧ್ಯತೆಯಿದೆ. ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಂಭವವಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಭಾಗಗಳಲ್ಲಿ ಬೆಳಗಿನ ವೇಳೆಯಲ್ಲಿ ಮಂಜು ಆವರಿಸುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 30 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಮೋಡ ಕವಿದ ಆಕಾಶವಿರಲಿದೆ.
ಮಂಗಳೂರು ಹಾಗೂ ಕಾರವಾರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ರಾಯಚೂರು, ವಿಜಯಪುರ ಹಾಗೂ ಕಲಬುರಗಿಯಲ್ಲಿಯೂ ಮೋಡ ಕವಿದ ಆಕಾಶ ಇರಲಿದೆ.