Today Rain: ರಾಜ್ಯದಲ್ಲಿ ಮಳೆ.. ಇಲ್ಲಿ ಯೆಲ್ಲೋ ಅಲರ್ಟ್ ಘೋಷಣೆ.. ದೆಹಲಿ & ಮುಂಬೈನಲ್ಲೂ ಮಳೆ
Today Rain: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿ ಹಾಗೂ ಮುಂಬೈನಲ್ಲೂ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ಕರ್ನಾಟಕದಲ್ಲಿ ವರುಣಾರ್ಭಟ ಮತ್ತೆ ಶುರುವಾಗಿದೆ. ಇಂದು ಮತ್ತು ನಾಳೆ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇವತ್ತು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ವಿಜಯಪುರ, ಬಾಗಲಕೋಟೆ, ಬೆಳಗಾವಿ ಹಾಗೂ ಧಾರವಾಡದಲ್ಲಿ ಧಾರಾಕಾರ ಮಳೆಯಾಗಲಿದೆ. ಹೀಗಾಗಿ, ಯೆಲ್ಲೋ ಅಲರ್ಟ್‌ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆ: ರಾಜಧಾನಿಯಲ್ಲಿಂದು ಗರಿಷ್ಠ 29 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ ಲಘು ಮಳೆಯಾಗಲಿದೆ.
ರಾಷ್ಟ್ರರಾಜಧಾನಿ ನವದೆಹಲಿಯೂ ಮಳೆ: ಇಲ್ಲಿ ಗರಿಷ್ಠ 35 ಹಾಗೂ ಕನಿಷ್ಠ 26 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ. ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆಯಿಂದ ರಾತ್ರಿಯವರೆಗೆ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಮುಂಬೈನಲ್ಲಿ ಭಾರೀ ಮಳೆ: ವಾಣಿಜ್ಯ ನಗರಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಮೋಡ ಕವಿದ ವಾತಾವರಣದೊಂದಿಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.