Karnataka Rain: ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಮಳೆ
Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ.
Karnataka Rain: ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಅಲ್ಲಲ್ಲಿ ನಿನ್ನೆ ಸಂಜೆ ಹಾಗೂ ಇವತ್ತು ಬೆಳಗ್ಗೆ ಸಾಮಾನ್ಯ ಮಳೆಯಾಗಿದೆ. ಕೋಲಾರದಲ್ಲಿ ಭಾರೀ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಕೋಲಾರದ ಬಂಗಾರಪೇಟೆ ತಾಲೂಕಿನ ಎಲೆಸಂದ್ರ ಗ್ರಾಮದಲ್ಲಿ 130.5 ಮಿ.ಮೀ ಮಳೆಯಾಗಿದೆ.
ಇವತ್ತಿನ ಮುನ್ಸೂಚನೆ ಪ್ರಕಾರ, ಕರಾವಳಿ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಮಧ್ಯಾಹ್ನ ನಂತರ ಮಳೆಯಾಗುವ ಮುನ್ಸೂಚನೆಯಿದೆ. ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳ ಘಟ್ಟಪ್ರದೇಶಗಳ ಅಲ್ಲಲ್ಲಿ ಸಂಜೆ ಗುಡುಗು ಮಳೆಯಾಗಬಹುದು. ಗ್ರಾಮಾಂತರ ಪ್ರದೇಶಗಳಲ್ಲಿ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ರಾತ್ರಿ ದಕ್ಷಿಣ ಕನ್ನಡ ಹಾಗೂ ಉಡುಪಿಯ ಕರಾವಳಿ ತೀರದ ತಾಲೂಕುಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವಾಗಿದ್ದು, ಆಂಧ್ರ ಪ್ರದೇಶ ಮೂಲಕ ಚಲಿಸುವ ಸಾಧ್ಯತೆಯಿದ್ದು, ಕರಾವಳಿಯಾದ್ಯಂತ ಸೆ 22, 23, 24 ರಂದು ಉತ್ತಮ ಮಳೆಯಾಗಬಹುದು.
ಮಲೆನಾಡಿನ ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸೆ.25 ರವರೆಗೆ ಮಳೆ ಮುಂದುವರೆಯಲಿದ್ದು, ಸೆ.26 ರಿಂದ ಪೂರ್ತಿ ಕಡಿಮೆಯಾಗಲಿದೆ.
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಂಜೆಯ ನಂತರ ಸಾಧಾರಣ ಮಳೆಯಾಗಬಹುದು. ಈ ಜಿಲ್ಲೆಗಳಲ್ಲಿ ಸೆ.25 ರವರೆಗೆ ಮಳೆ ಮುಂದುವರೆಯಬಹುದು. 26 ರಿಂದ ಮಳೆಯೂ ಇಳಿಯಲಿದೆ.
ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಸಾಮಾನ್ಯ ಮಳೆಯಾಗುವ ಮುನ್ಸೂಚನೆ ಇದೆ. ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬಿಜಾಪುರ, ಯಾದಗಿರಿ, ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ತುಂತುರು - ಗುಡುಗು ಸಹಿತ ಲಘು ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಸೆ 25 ರವರೆಗೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಸೆ 26 ರಿಂದ ಮಳೆ ಪ್ರಮಾಣವು ಕಡಿಮೆಯಾಗಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.