Karnataka Rain: ರಾಜ್ಯದಲ್ಲಿ ವಿವಿಧ ಭಾಗಗಳಲ್ಲಿ ಇಂದು ಮಳೆ
Karnataka Rain: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು: ರಾಜ್ಯದಾದ್ಯಂತ ಅಲ್ಲಲ್ಲಿ ಇಂದು ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿಂದು ಸಾಮಾನ್ಯ ಮೋಡ ಕವಿದ ವಾತಾವರಣದೊಂದಿಗೆ, ಒಂದೆರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಉತ್ತರ ಒಳನಾಡಿನ ಕಲಬುರಗಿ ಹಾಗೂ ರಾಯಚೂರಿನಲ್ಲೂ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಆಗುಂಬೆಯಲ್ಲಿ ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ರಾಜ್ಯಗಳ ಜೊತೆಗೆ ಛತ್ತೀಸ್‌ಗಢ, ವಿದರ್ಭ ಹಾಗೂ ಒಡಿಶಾದಲ್ಲಿ ಕೂಡ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಇವತ್ತು ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಯಾವುದೇ ರೀತಿಯಲ್ಲಿ ಮಳೆಯಾಗುವುದಿಲ್ಲ. ವಾರದ ಬಳಿಕ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗುವ ಸಂಭವವಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.