Karnataka Rain: ರಾಜ್ಯದಲ್ಲಿಂದು ಸಾಧಾರಣ ಮಳೆ
Karnataka Rain: ರಾಜ್ಯದ ವಿವಿಧೆಡೆ ಇಂದು ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಮಧ್ಯಾಹ್ನದ ನಂತರ, ಕೆಲವೆಡೆ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಜೋರಾದ ಗಾಳಿಯೊಂದಿಗೆ, ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವಾಗಿದೆ. ಅದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಬೆಂಗಳೂರು ನಗರದಲ್ಲಿ ಇಂದು ಗರಿಷ್ಠ 30 ಹಾಗೂ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದ್ದು, ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಮುಂಬೈ ಮಹಾನಗರದಲ್ಲಿ ಸಾಮಾನ್ಯ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗಲಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.