ಈ ದಿನದ ರಾಶಿ ಭವಿಷ್ಯ

ರಾಶಿ ಭವಿಷ್ಯ

Dec 4, 2024 - 05:28
ಈ ದಿನದ ರಾಶಿ ಭವಿಷ್ಯ
ರಾಶಿ ಭವಿಷ್ಯ

ದಿನ ಭವಿಷ್ಯ

             ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ  4

1) ಮೇಷ: ಕಠಿನವಾಗಿ  ತೋರುವ ಸುಲಭ ಸವಾಲುಗಳು. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು.  ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸೇವಾಕ್ಷೇತ್ರಗಳಿಗೆ ಪ್ರವೇಶದಿಂದ ಕೀರ್ತಿ.ಗಣೇಶ ದ್ವಾದಶನಾಮ ಸ್ತೋತ್ರ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಆದಿತ್ಯ ಹೃದಯ ಓದಿ.


 

2)ವೃಷಭ:

ಸೂಕ್ಷ್ಮವಾದ ವಿಧಾನದಿಂದ ಕಾರ್ಯಸಾಧನೆ. ಸಾಮಾಜಿಕ ಕಾರ್ಯಗಳಿಗೆ  ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ   ಲಾಭ‌.ವ್ಯವಹಾರಾರ್ಥ ಊರೊಳಗೆ  ತಿರುಗಾಟ. ಗಣೇಶ ಕವಚ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.

3)ಮಿಥುನ:
ಉದ್ಯೋಗಸ್ಥರಿಗೆ ಸದ್ವರ್ತನೆಯಿಂದ ಶ್ಲಾಘನೆ. ಉದ್ಯಮಗಳ ಪಾಲಿಗೆ ಶುಭದಿನ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ.ಸ್ವಾವಲಂಬಿ ಜೀವನಕ್ಕೆ ಅನುಕೂಲ ವಾತಾವರಣ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

4)ಕರ್ಕಾಟಕ:
ಹಿಂದೆಮುಂದೆ ನೋಡದೆ ಮಾತು ಕೊಡದಿರಿ... ಉದ್ಯಮಗಳಿಗೆ ಕಾನೂನು ತೊಂದರೆ.. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


5)ಸಿಂಹ:
ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ  ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ಪ್ರಸ್ತಾವ ಒಪ್ಪಲು ಹಿಂಜರಿಕೆ ಬೇಡ. ಉದ್ಯೋಗಸ್ಥ ಮಹಿಳೆಯರಿಗೆ ಶುಭದಿನ. ಗಣೇಶ ಪಂಚರತ್ನ, ನರಸಿಂಹ ಕವಚ, ಗುರುಸ್ತೋತ್ರ ಓದಿ.

6)ಕನ್ಯಾ:
ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ  ಉದ್ಯಮದಲ್ಲಿ  ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.ಗಣೇಶ ಕವಚ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

7)ತುಲಾ:
ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ದಿನ. ಗಣೇಶ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ. ಈಜುವ ಹವ್ಯಾಸ ಉಳ್ಳವರು ಎಚ್ಚರ. ಮಹಿಳೆಯರ ನೇತೃತ್ವದ  ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.

8)ವೃಶ್ಚಿಕ:
ಅಧಿಕ ಕೆಲಸ ಮಾಡಲು ಉತ್ತೇಜನ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ ಯಂತ್ರೋಪಕರಣ  ವ್ಯಾಪಾರಿಗಳಿಗೆ  ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.ಗಣೇಶ ಅಷ್ಟಕ, ದಕ್ಷಿಣಾಮೂರ್ತಿ ಸ್ತೋತ್ರ, ಸೂರ್ಯಮಂಡಲ ಸ್ತೋತ್ರ ಓದಿ.


9)ಧನು:
ಸಹೋದ್ಯೋಗಿಗಳಿಂದ ಪ್ರೀತಿ,ಗೌರವದ  ವರ್ತನೆ. ಕುಟುಂಬ ಕಲಹ ಪರಿಹಾರವಾಗಿ ನೆಮ್ಮದಿ.  ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ.. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ..ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.

10)ಮಕರ:
ಯೋಜನಾಬದ್ಧ ನಡೆಯಿಂದ ಕಾರ್ಯಸಿದ್ಧಿ. ವಸ್ತ್ರ,  ಆಭರಣ, ಪಾದರಕ್ಷೆ, ಶೋಕಿ ವಸ್ತು ವ್ಯಾಪಾರಿಗಳಿಗೆ ಹೇರಳ ಲಾಭ.  ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ.ಹಿರಿಯರ ಆರೋಗ್ಯದ ಕಾಳಜಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.

 
11)ಕುಂಭ:
 ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ  ಮತ್ತಷ್ಟು  ಅವಕಾಶಗಳು. ಟೈಲರಿಂಗ್, ಕರಕುಶಲ ಕೆಲಸ  ಬಲ್ಲವರಿಗೆ ಉದ್ಯೋಗಾವಕಾಶ.ದೇವತಾ ಕಾರ್ಯದಲ್ಲಿ ಭಾಗಿ. ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಶನಿಸ್ತೋತ್ರ ಓದಿ.

12)ಮೀನ:
ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ.   ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ರಂಗ ಸಜ್ಜಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.