Toxic: ನಾಳೆ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಬಿಡುಗಡೆ

Toxic: ರಾಕಿಂಗ್ ಸ್ಟಾರ್ ಯಶ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್' ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಆ.8) ಅದ್ದೂರಿಯಾಗಿ ರಿಲೀಸ್ ಆಗಲಿದೆ.

Aug 7, 2026 - 18:05
Toxic: ನಾಳೆ 'ಟಾಕ್ಸಿಕ್' ಸಿನಿಮಾದ ಟ್ರೇಲರ್ ಬಿಡುಗಡೆ

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್' (Toxic) ಟ್ರೇಲರ್ ಬಿಡುಗಡೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ (ಆ.8) ಅದ್ದೂರಿಯಾಗಿ ರಿಲೀಸ್ ಅಗಲಿದ್ದು, ಸಂಜೆ 6:02ಕ್ಕೆ ಹೊರಬರಲಿದೆ ಎಂಬ ವಿವರಗಳು ಲಭ್ಯವಾಗಿವೆ. 

ಬೆಂಗಳೂರಿನ ಮೆಜೆಸ್ಟಿಕ್ ಸಮೀಪದ ಎಎಂಬಿ ಮಾಲ್‌ನಲ್ಲಿ ಭರ್ಜರಿಯಾಗಿ ಲಾಂಚ್ ಈವೆಂಟ್ ಆಯೋಜನೆಗೊಂಡಿದೆ. ಈ ಚಿತ್ರವು ಆಗಸ್ಟ್ 26 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಇದು ಬಿಗ್ ಬಜೆಟ್ ಸಿನಿಮಾವಾಗಿದ್ದು, ಗೀತು ಮೋಹನ್‌ದಾಸ್ ಆಕ್ಷನ್ ಕಟ್ ಹೇಳಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಿಸಿದೆ. ಈಗಾಗಲೇ ಮನಮೋಹಕ.. ಹಾಗೂ ತಬಾಹಿ.. ಸಾಂಗ್ ಹಿಟ್ ಆಗಿದ್ದು, ಪ್ರೇಕ್ಷಕರು ಕೂಡ ದೊಡ್ಡ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. 

ಈ ಚಿತ್ರದಲ್ಲಿ ದೊಡ್ಡ ತಾರಾಗಣವೇ ಇದೆ. ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಮತ್ತು ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.