IND vs SLA: ನಾಳೆಯಿಂದ 2ನೇ ಟೆಸ್ಟ್ ಪಂದ್ಯ

IND vs SLA: ನಾಳೆಯಿಂದ ಆ.27 ರವರೆಗೆ ಕೊಲಂಬೊದಲ್ಲಿ ಭಾರತ-ಶ್ರೀಲಂಕಾ ನಡುವೆ ಎರಡನೇ ಟೆಸ್ಟ್ ಪಂದ್ಯವು ನಡೆಯಲಿದೆ.

Aug 22, 2026 - 14:12
Aug 22, 2026 - 14:13
IND vs SLA: ನಾಳೆಯಿಂದ 2ನೇ ಟೆಸ್ಟ್ ಪಂದ್ಯ

ಕೊಲಂಬೊ: ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸದಲ್ಲಿದೆ. ನಾಳೆಯಿಂದ ಆ.27 ರವರೆಗೆ ಎರಡನೇ ಟೆಸ್ಟ್ ಪಂದ್ಯವು ಕೊಲಂಬೊದಲ್ಲಿ ನಡೆಯಲಿದೆ. 

ಈಗಾಗಲೇ, ಭಾರತವು ಗಾಲೆಯಲ್ಲಿ ಜರುಗಿದ ಮೊದಲ ಪಂದ್ಯದಲ್ಲಿ 165 ರನ್‌ಗಳಿಂದ ಜಯಿಸಿದೆ. ಈ ಮೂಲಕ ಶೀಲಂಕಾ ವಿರುದ್ದದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದು ಟೀಮ್ ಇಂಡಿಯಾದ 600ನೇ ಟೆಸ್ಟ್ ಪಂದ್ಯವಾಗಿತ್ತು.

ಇದರೊಂದಿಗೆ ಭಾರತವು ಶ್ರೀಲಂಕಾ ಎದುರಿಗೆ ಸತತವಾಗಿ 11 ಟೆಸ್ಟ್‌ಗಳಲ್ಲಿ ಜಯಿಸಿದೆ. ಆದಾಗ್ಯೂ 2015ರಲ್ಲಿ ಕೊನೆಯ ಬಾರಿಗೆ ಟೀಂ ಇಂಡಿಯಾ ಸೊತ್ತಿತ್ತು. 

ಎರಡನೇ ಟೆಸ್ಟ್ ಸಂಭಾವ್ಯ ಪ್ಲೇಯಿಂಗ್ 11:

ಭಾರತ: ಯಶಸ್ವಿ ಜೈಸ್ವಾಲ್, ಕೆ.ಎಲ್.ರಾಹುಲ್, ದೇವದತ್ ಪಡಿಕ್ಕಲ್, ಶುಭ್‌ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್/ ಸರ್ಫರಾಜ್ ಖಾನ್, ರವೀಂದ್ರ ಜಡೇಜಾ, ಮಾನವ್ ಸುತಾರ್, ಕುಲದೀಪ್ ಯಾದವ್/ ಸಾರಾಂಶ್ ಜೈನ್, ಮೊಹಮ್ಮದ್ ಸಿರಾಜ್ ಹಾಗೂ ಪ್ರಸಿದ್ಧ್‌ ಕೃಷ್ಣ.

ಶ್ರೀಲಂಕಾ: ಲಹಿರು ಉದಾರ, ನಿಶಾನ್ ಮದುಷ್ಕಾ, ಕಾಮಿಲ್ ಮಿಶಾರ, ಕಮಿಂದು ಮೆಂಡಿಸ್, ಧನಂಜಯ ಡಿ ಸಿಲ್ವಾ (ನಾಯಕ), ಸಹನ್ ಅರಚ್ಚಿಗೆ, ನಿರೋಶನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಸೋನಲ್ ದಿನುಷಾ, ಪ್ರಬಾತ್ ಜಯಸೂರ್ಯ, ಅಸಿತ ಫೆರ್ನಾಂಡೋ ಮತ್ತು ಲಹಿರು ಕುಮಾರ/ ವಿಶ್ವ ಫೆರ್ನಾಂಡೋ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.