Karavali: ನಾಳೆ ರಾಜ್ಯಾದ್ಯಂತ 'ಕರಾವಳಿ' ಸಿನಿಮಾ ರಿಲೀಸ್

Karavali: ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ 'ಕರಾವಳಿ' ನಾಳೆ (ಜುಲೈ 24) ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Jul 23, 2026 - 13:56
Karavali: ನಾಳೆ ರಾಜ್ಯಾದ್ಯಂತ 'ಕರಾವಳಿ' ಸಿನಿಮಾ ರಿಲೀಸ್

ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ (Karavali), ನಾಳೆ (ಜುಲೈ 24) ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಸದ್ಯ ಈ ಸಿನಿಮಾ ಮೇಲೆ ಪ್ರೇಕ್ಷಕರ ನೀರಿಕ್ಷೆಗಳು ದುಪ್ಪಟ್ಟಾಗಿವೆ.

ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಕಂಬಳ & ಕರಾವಳಿ ಸಂಸ್ಕೃತಿಯ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಒಟ್ಟಿಗೆ ನಟಿಸಿದ್ದಾರೆ. 

ಮಂಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಮೈಸೂರಿನಲ್ಲಿ ಪ್ರೀಮಿಯರ್ ಶೋ ನೋಡಿ, ಜನರು ಖುಷಿ ಪಟ್ಟಿದ್ದಾರೆ. ಕರಾವಳಿ ಮಂದಿಗೆ ಎಮೋಷನಲ್ ಆಗಿ ಕನೆಕ್ಟ್ ಆಗಿದೆ. ವಿಶೇಷವಾಗಿ ಮಿತ್ರ ಅಭಿನಯಕ್ಕೆ ಜೈ ಎಂದಿದ್ದಾರೆ. ಇಷ್ಟು ದಿನ ನಗಿಸುತ್ತಿದ್ದ ಅವರು, ಎಲ್ಲರನ್ನು ಅಳಿಸಿದ್ದಾರೆ. 

ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳಿದ್ದು, ಅವರದ್ದೇ ಗಾಣಿಗ ಫಿಲ್ಮ್ಸ್ ಬ್ಯಾನರ್‌ನಡಿ ಬಿಗ್ ಬಜೆಟ್‌ನಲ್ಲಿ ಅದ್ದೂರಿಯಾಗಿ ನಿರ್ಮಿಸಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಸಾಥ್ ನೀಡಿದೆ. ಕೆಜಿಎಫ್ ಖ್ಯಾತಿಯ ರವಿ ಬಸ್ರೂರ್ ತಂಡದ ಸಚಿನ್ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ. ಅಭಿಮನ್ಯು ಸದಾನಂದನ್ ಕ್ಯಾಮೆರಾ ವರ್ಕ್ ಮಾಡಿದ್ದು, ಪ್ರತೀಕ್ ಶೆಟ್ಟಿ ಎಡಿಟಿಂಗ್ ಕೆಲಸ ನಿರ್ವಹಿಸಿದ್ದಾರೆ.

ಇದು ಪ್ರಜ್ವಲ್ ದೇವರಾಜ್ ಅಭಿನಯದ 40ನೇ ಸಿನಿಮಾವಾಗಿದೆ. ಸಂಪದಾ ಹುಲಿವಾನ ಹಾಗೂ ಸುಷ್ಮಿತಾ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ರಮೇಶ್ ಇಂದಿರಾ ಮತ್ತು ಶ್ರೀಧರ್ ಸೇರಿದಂತೆ ಹಲವಾರು ಮುಖ್ಯಭೂಮಿಕೆಯಲ್ಲಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.