Karnataka Bandh: ಕರ್ನಾಟಕ ಬಂದ್: ನಾಳೆ ಇದ್ಯಾ?
Karnataka Bandh: ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದೆ. ನಾಳೆ (ಆ.13) ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕಾವೇರಿ ವಿವಾದ ಭುಗಿಲೆದ್ದಿದೆ. ನಾಳೆ (ಆ.13) ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ (Vatal Nagaraj) ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಆದಾಗ್ಯೂ ರೈತಪರ, ಸಾರಿಗೆ ಮತ್ತು ಕನ್ನಡ ಸಂಘಟನೆಗಳು ಬೆಂಬಲ ಕೊಟ್ಟಿಲ್ಲ. ಹೀಗಾಗಿ, ಜನಜೀವನವು ಎಂದಿನಂತೆ ಇರಲಿದೆ.
ಏನಿರುತ್ತೆ:
ಯಾವುದೇ ಸೇವೆಗಳಲ್ಲಿ ಬದಲಾವಣೆಗಳು ಇರುವುದಿಲ್ಲ. ಬಸ್‌ಗಳು, ಆಟೋ ರಿಕ್ಷಾ ಮತ್ತು ಟ್ಯಾಕ್ಸಿಗಳು ಸಂಚರಿಸಲಿವೆ. ಆಸ್ಪತ್ರೆಗಳು ಹಾಗೂ ಮೆಡಿಕಲ್ ಶಾಪ್‌ಗಳು ಕಾರ್ಯನಿರ್ವಹಿಸಲಿವೆ. ದಿನಸಿ ಅಂಗಡಿಗಳು, ಹಾಲು, ತರಕಾರಿ ಮಾರುಕಟ್ಟೆಗಳು, ಹೋಟೆಲ್‌ಗಳು, ಚಿತ್ರಮಂದಿರಗಳು & ರೆಸ್ಟೋರೆಂಟ್‌ಗಳು ತೆರೆದಿರಲಿವೆ.
ಬಂದ್‌ಗೆ ಯಾರು ಬೆಂಬಲವಿದೆ:
ಕನ್ನಡ ಸೇನೆ, ಕನ್ನಡ ಜಾಗೃತಿ ವೇದಿಕೆ ಮತ್ತು ಸಣ್ಣಪುಟ್ಟ ಸಂಘಟನೆಗಳು ಬೆಂಬಲ ನೀಡಿವೆ. ಆದರೆ, ಖಾಸಗಿ ಶಾಲಾ ಒಕ್ಕೂಟ ಹಾಗೂ ಹೋಟೆಲ್ ಮಾಲೀಕ ಸಂಘಟನೆಗಳು ನೈತಿಕ ಬೆಂಬಲವನ್ನು ಮಾತ್ರ ಕೊಟ್ಟಿವೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.