September-21 Movie: ನಾಳೆ 'ಸೆಪ್ಟೆಂಬರ್-21' ಸಿನಿಮಾ ಒಟಿಟಿಯಲ್ಲಿ ಬಿಡುಗಡೆ

September-21 Movie: ಪ್ರಿಯಾಂಕಾ ಉಪೇಂದ್ರ ನಟನೆಯ ಕೌಟುಂಬಿಕ ಸಿನಿಮಾ 'ಸೆಪ್ಟೆಂಬರ್-21' ಒಟಿಟಿಯಲ್ಲಿ ಬಿಡುಗಡೆಗೊಳ್ಳಲು ಸಿದ್ಧವಾಗಿದೆ.

Aug 13, 2026 - 19:00
September-21 Movie: ನಾಳೆ 'ಸೆಪ್ಟೆಂಬರ್-21' ಸಿನಿಮಾ ಒಟಿಟಿಯಲ್ಲಿ ಬಿಡುಗಡೆ

ಪ್ರಿಯಾಂಕಾ ಉಪೇಂದ್ರ ನಟನೆಯ ಕೌಟುಂಬಿಕ ಸಿನಿಮಾ 'ಸೆಪ್ಟೆಂಬರ್-21' (September 21) ಒಟಿಟಿಯಲ್ಲಿ ಬಿಡುಗಡೆಗೊಳ್ಳಲು ಸಿದ್ಧವಾಗಿದೆ. ನಾಳೆ (ಆ.14) 'ಸನ್ ನೆಕ್ಸ್ಟ್' ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ. 

ಇದು 'ಮರೆವಿನ ಕಾಯಿಲೆ' ರೋಗಿಯನ್ನು ಆರೈಕೆ ಮಾಡುವ ಕೇರ್ ಟೇಕರ್ ಸಂಬಂಧವನ್ನು ಹೃದಯಸ್ಪರ್ಶಿಯಾಗಿ ವಿವರಿಸುವ ಕಥಾಹಂದರವನ್ನು ಹೊಂದಿದೆ. 

ನಿರ್ದೇಶಕ ಕರೆನ್ ಕ್ಷಿತಿ ಸುವರ್ಣ ಆಕ್ಷನ್ ಕಟ್ ಹೇಳಿದ್ದಾರೆ. ಹಮಾರಾ ಮೂವಿ, ವಿಸಿಕಾ ಫಿಲ್ಮ್ & ಎಫ್‌ಎಂಡಿ ಪ್ರೊಡಕ್ಷನ್ಸ್ ಬ್ಯಾನರ್‌ನಡಿ ನಿರ್ಮಿಸಲಾಗಿದೆ.  

ಪ್ರವೀಣ್ ಸಿಂಗ್ ಸಿಸೋಡಿಯಾ, ಅವಿನಾಶ್, ಸುಚೇಂದ್ರ ಪ್ರಸಾದ್, ಶಶಿಕುಮಾರ್ ಹಾಗೂ ವಿನಯಾ ಪ್ರಸಾದ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ವಿನಯ್ ಚಂದ್ರಾ ಸಂಗೀತ ನೀಡಿದ್ದು, ಅನಿಲ್ ಕುಮಾರ್ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ವಿನಯ್ ಶಾಂಡಿಲ್ಯ ಮತ್ತು ಭೂಪೇಂದ್ರ ನಂದನ್ ಸಂಭಾಷಣೆ ಬರೆದಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.