Toxic: 200 ಕೋಟಿ ರೂ. ಗಡಿಯತ್ತ 'ಟಾಕ್ಸಿಕ್'

Toxic: ರಾಕಿಂಗ್ ಸ್ಟಾರ್ ಯಶ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ 'ಟಾಕ್ಸಿಕ್' ಭರ್ಜರಿ ಕಲೆಕ್ಷನ್ ಮಾಡಿದೆ.

Aug 28, 2026 - 15:54
Toxic: 200 ಕೋಟಿ ರೂ. ಗಡಿಯತ್ತ 'ಟಾಕ್ಸಿಕ್'

ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ಟಾಕ್ಸಿಕ್ (Toxic), ಬುಧವಾರ ರಿಲೀಸ್ ಆಗಿತ್ತು. ನಿರೀಕ್ಷೆಗೂ ಮೀರಿ ಭರ್ಜರಿ ಓಪನಿಂಗ್ ಪಡೆದಿದೆ. 

ಸ್ಯಾಕ್ನಿಲ್ಕ್ ಪ್ರಕಾರ, 2ನೇ ದಿನವಾದ ಗುರುವಾರದಂದು ಭಾರತದಲ್ಲಿ ರೂ.36.40 ಕೋಟಿ ನೆಟ್ ಬ್ಯುಸಿನೆಸ್ ಮಾಡಿದೆ. 22,629 ಶೋಗಳು ಪ್ರದರ್ಶನಗೊಂಡಿದೆ. ಇದರೊಂದಿಗೆ ವಿಶ್ವಾದ್ಯಂತ ರೂ.190.75 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. 

ಈ ಚಿತ್ರವನ್ನು ಗೀತು ಮೋಹನ್‌ದಾಸ್ ನಿರ್ದೇಶನ ಮಾಡಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಬಿಗ್ ಬಜೆಟ್‌ನಲ್ಲಿ ನಿರ್ಮಿಸಿದೆ. ಯಶ್‌ರ ಅಬ್ಬರ ಜೋರಾಗಿದ್ದು, ದ್ವಿಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. 

ನಯನತಾರಾ, ತಾರಾ ಸುತಾರಿಯಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ ಹಾಗೂ ರುಕ್ಮಿಣಿ ವಸಂತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.