Toyota: 34.47 ಕಿ.ಮೀ ಮೈಲೇಜ್.. ಬರೀ 6.99 ಲಕ್ಷ.. ಹೊಸ ಟೊಯೊಟಾ ಕಾರು ಬಿಡುಗಡೆ

Toyota Glanza Facelift: 2026ರ ಹೊಸ 'ಟೊಯೊಟಾ ಗ್ಲಾನ್ಜಾ ಫೇಸ್‌ಲಿಫ್ಟ್' ಹ್ಯಾಚ್‌ಬ್ಯಾಕ್ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Oct 14, 2026 - 16:52
Toyota: 34.47 ಕಿ.ಮೀ ಮೈಲೇಜ್.. ಬರೀ 6.99 ಲಕ್ಷ.. ಹೊಸ ಟೊಯೊಟಾ ಕಾರು ಬಿಡುಗಡೆ

Toyota Glanza Facelift: 2026ರ ಹೊಸ 'ಟೊಯೊಟಾ ಗ್ಲಾನ್ಜಾ ಫೇಸ್‌ಲಿಫ್ಟ್' ಹ್ಯಾಚ್‌ಬ್ಯಾಕ್ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಸದ್ಯ, ಬುಕ್ಕಿಂಗ್‌ ಶುರುವಾಗಿದೆ. ಆಸಕ್ತ ಗ್ರಾಹಕರು ರೂ.11,000 ಮುಂಗಡ ಹಣವನ್ನು ಪಾವತಿಸಿ ಆರ್ಡರ್ ಮಾಡಬಹುದು. ನವೆಂಬರ್‌ನ ಮೊದಲ ವಾರದಲ್ಲಿ ವಿತರಣೆಗಳು ಪ್ರಾರಂಭವಾಗಲಿದೆ. 

ಇದು ಕೈಗೆಟಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.99 ಲಕ್ಷದಿಂದ ರೂ.10.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಜಿ, ವಿ ಹಾಗೂ ವಿ (ಒ) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 

ಈ ಕಾರು ವಿನ್ಯಾಸದಲ್ಲಿ ಒಂದಷ್ಟು ಬದಲಾವಣೆಗಳನ್ನು ಪಡೆದುಕೊಂಡಿದೆ. ಅತ್ಯುತ್ತಮವಾದ ಬಂಪರ್ ಹಾಗೂ ದೊಡ್ಡದಾದ ಹನಿಕಾಂಬ್ ಮೆಶ್' ಗ್ರಿಲ್‌ನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಸಿ-ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. 

ಮುಂಭಾಗದ ಫೆಂಡರ್‌ನಲ್ಲಿ ಹೊಸ ಕ್ರೋಮ್ ಗಾರ್ನಿಶ್ & ಶಾರ್ಕ್‌ಫಿನ್ ಆಂಟೆನಾವನ್ನು ತನ್ನದಾಗಿಸಿಕೊಂಡಿದೆ. ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಇನ್ಸ್ಟಾ ಬ್ಲೂ, ಬ್ಲೂಯಿಷ್ ಬ್ಲ್ಯಾಕ್ ಹಾಗೂ ಡಿಜಿಟಲ್ ಟೀಲ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಟೊಯೊಟಾ ಗ್ಲಾನ್ಜಾ' 5-ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. ಇದರ 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 83 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 112 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಮ್ಯಾನುವಲ್/  5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 23.80 ರಿಂದ 24.77 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಮತ್ತೊಂದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್, 70 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 102 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 5-ಸ್ಪೀಡ್ ಮ್ಯಾನುವಲ್/  5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 33.61 ರಿಂದ  34.47 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 

ಇದರ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್,  ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 3-ಸ್ಪೋಕ್ ಸ್ಟೀರಿಂಗ್ ವೀಲ್, ಹೆಡ್-ಅಪ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು ಹಾಗೂ ಯುಎಸ್‌ಬಿ  ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 

ಈ ಕಾರು ಸುರಕ್ಷತೆಗೂ ಹೆಸರುವಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಹೋಲ್ಡ್ ಅಸಿಸ್ಟ್, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) , ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. 

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.