Toyota: 30 ಕಿ.ಮೀ ಮೈಲೇಜ್.. 5-ಸೀಟರ್, 6.73 ಲಕ್ಷ.. ಟೊಯೊಟಾ ಗ್ಲಾನ್ಜಾ ಕುರಿತ ಪ್ರಮುಖಾಂಶಗಳು

Toyota Glanza: ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ 'ಟೊಯೊಟಾ ಗ್ಲಾನ್ಜಾ' ಬೆಸ್ಟ್ ಚಾಯ್ಸ್ ಆಗಲಿದೆ.

Jul 24, 2026 - 16:19
Toyota: 30 ಕಿ.ಮೀ ಮೈಲೇಜ್.. 5-ಸೀಟರ್, 6.73 ಲಕ್ಷ.. ಟೊಯೊಟಾ ಗ್ಲಾನ್ಜಾ ಕುರಿತ ಪ್ರಮುಖಾಂಶಗಳು

ನೀವು ಹೊಚ್ಚ ಹೊಸ ಕಾರೊಂದನ್ನು ಕೊಂಡುಕೊಳ್ಳಲು ಆಲೋಚಿಸಿದ್ದೀರಾ.. ಹಾಗಾದರೆ ಟೊಯೊಟಾ ಗ್ಲಾನ್ಜಾ (Toyota Glanza) ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಬೆಸ್ಟ್ ಚಾಯ್ಸ್ ಆಗಲಿದೆ. ನಾವಿಲ್ಲಿ ಈ ಕಾರಿನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಇದು ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.6.73 ರಿಂದ ರೂ.9.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಜಿ & ವಿ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. 

ವಿನ್ಯಾಸ & ಬಣ್ಣಗಳು Design & Colours):

ಈ ಕಾರು ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು ಮತ್ತು 16-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಇನ್‌ಸ್ಟಾ ಬ್ಲೂ, ಗೇಮಿಂಗ್ ಗ್ರೇ ಹಾಗೂ ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 

ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space): 

ನೂತನ 'ಗ್ಲಾನ್ಜಾ' 5 ಆಸನಗಳನ್ನು ಪಡೆದಿದೆ. ದೂರದ ಊರುಗಳಿಗೆ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

ಕಾರ್ಯಕ್ಷಮತೆ (Performance): 

ಇದು ಹೆಚ್ಚು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ  1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ.  22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 

ವೈಶಿಷ್ಟ್ಯಗಳು (Features):

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ & ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.