Toyota: ಟೊಯೋಟಾ ಇನ್ನೋವಾ ಕ್ರಿಸ್ಟಾ ಬೆಲೆ ಏರಿಕೆ.. ಎಷ್ಟಾಗಿದೆ?
Toyota Innova Crysta: ಟೊಯೋಟಾ ಇನ್ನೋವಾ ಕ್ರಿಸ್ಟಾ ಜನಪ್ರಿಯ ಎಂಪಿವಿಯಾಗಿದ್ದು, ಸದ್ಯ ಈ ಕಾರಿನ ಬೆಲೆ ಏರಿಕೆಯಾಗಿದೆ.
Toyota Innova Crysta: ಟೊಯೋಟಾ ಇನ್ನೋವಾ ಕ್ರಿಸ್ಟಾ ಜನಪ್ರಿಯ ಎಂಪಿವಿಯಾಗಿದ್ದು, ಸದ್ಯ ಈ ಕಾರಿನ ಬೆಲೆ ಏರಿಕೆಯಾಗಿದೆ. ರೂಪಾಂತರಗಳಿಗೆ ಅನುಗುಣವಾಗಿ ರೂ.23,000 ರಿಂದ ರೂ.33,000 ವರೆಗೆ ಅಧಿಕಗೊಂಡಿದೆ. ಈ ಮೂಲಕ ರೂ.19.95 ಲಕ್ಷದಿಂದ ರೂ.29.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಇದು ಜಿಎಕ್ಸ್, ಜಿಎಕ್ಸ್ ಪ್ಲಸ್, ವಿಎಕ್ಸ್ ಮತ್ತು ಝಡ್ಎಕ್ಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಲಭ್ಯವಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.
ಈ ಎಂಪಿವಿ ಪ್ಲಾಟಿನಂ ವೈಟ್ ಪರ್ಲ್, ಸೂಪರ್ ವೈಟ್, ಸಿಲ್ವರ್ ಮೆಟಾಲಿಕ್ ಹಾಗೂ ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಸೇರಿದಂತೆ ವಿವಿಧ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 178 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,750 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಇನ್ನೋವಾ ಕ್ರಿಸ್ಟಾ' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 9 ರಿಂದ 10.5 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ.
ಇದರಲ್ಲಿ 7/ 8 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, 7-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.