Toyota Innova: 2026ರ ಟೊಯೊಟಾ ಇನೋವಾ ಹೈಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ, ಬೆಲೆ ಎಷ್ಟು?

Toyota Innova Hycross Facelift: 2026ರ 'ಟೊಯೊಟಾ ಇನೋವಾ ಹೈಕ್ರಾಸ್ ಫೇಸ್‌ಲಿಫ್ಟ್' ಎಂಪಿವಿ ಬುಧವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Nov 26, 2026 - 15:34
Nov 26, 2026 - 15:37
Toyota Innova: 2026ರ ಟೊಯೊಟಾ ಇನೋವಾ ಹೈಕ್ರಾಸ್ ಫೇಸ್‌ಲಿಫ್ಟ್ ಬಿಡುಗಡೆ, ಬೆಲೆ ಎಷ್ಟು?

Toyota Innova Hycross Facelift: ಬಹುನಿರೀಕ್ಷಿತ 2026ರ 'ಟೊಯೊಟಾ ಇನೋವಾ ಹೈಕ್ರಾಸ್ ಫೇಸ್‌ಲಿಫ್ಟ್' ಎಂಪಿವಿ ಬುಧವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. 

ಇದು ರೂ.19.99 ಲಕ್ಷದಿಂದ ರೂ.31.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜಿ, ಜಿಎಕ್ಸ್, ವಿಎಕ್ಸ್ ಹಾಗೂ ಜಡ್ಎಕ್ಸ್ ಎಂಬ ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿದೆ. 

ಈ ಕಾರು ಆತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡಲು 'ಹಿಲಕ್ಸ್'ನಂತೆ ಭಾಸವಾಗುತ್ತದೆ. ಅದಕ್ಕೆ ತಕ್ಕಂತೆ ಬೃಹದಾಕಾರದ 'ಗ್ರಿಲ್'ನ್ನು ಪಡೆದಿದೆ. 

ಹೊಸದಾದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟಪ್, ಎಲ್‌ಇಡಿ ಫಾಗ್ ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಡಿಆರ್‌ಎಲ್‌ಗಳನ್ನು ಹೊಂದಿದೆ. ಎಲ್ಐಡಿ ಟರ್ನ್ ಇಂಡಿಕೇಟರ್‌ಗಳು, ಕ್ರೋಮ್ ಡೋರ್ ಹ್ಯಾಂಡಲ್‌ಗಳು, 18-ಇಂಚಿನ ಅಲಾಯ್ ವೀಲ್‌ಗಳು ಹಾಗೂ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳನ್ನು ತನ್ನದಾಗಿಸಿಕೊಂಡಿದೆ. 

ಬ್ಲಾಕಿಶ್ ಅಗೆಹಾ ಗ್ಲಾಸ್ ಫ್ಲೇ, ಪ್ಲಾಟಿನಂ ವೈಟ್ ಪರ್ಲ್, ಸಿಲ್ವರ್ ಮೆಟಾಲಿಕ್, ಆಟಿಟ್ಯೂಡ್ ಬ್ಲಾಕ್ ಮೈಕಾ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 

ನೂತನ 'ಇನೋವಾ ಹೈಕ್ರಾಸ್'  7/ 8 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 

ಇದು ಬಲಿಷ್ಠವಾದ ಎರಡು ಪವರ್‌ಟ್ರೇನ್‌ನ್ನು ಪಡೆದಿದೆ. ಇದರ 2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 173 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 

ಮತ್ತೊಂದು 2-ಲೀಟರ್ ಫ್ಲೆಕ್ಸ್-ಫ್ಯುಯೆಲ್ ಸ್ಟ್ರಾಂಗ್ ಹೈಬ್ರಿಡ್ ಎಂಜಿನ್, 200 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 206 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಫ್ಲೆಕ್ಸ್-ಫ್ಯುಯೆಲ್ ಆಯ್ಕೆಯಿರುವುದರಿಂದ 'ಇ85'ವರೆಗಿನ ಎಥೆನಾಲ್ ಮಿಶ್ರಣಗಳನ್ನು ಬೆಂಬಲಿಸುತ್ತದೆ. 

ಈ ಕಾರಿನ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ನವೀನವಾದ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟುಗಳು, ಡ್ಯಾಶ್‌ಬೋರ್ಡ್ & ಡೋರ್ ಪ್ಯಾನೆಲ್‌ಗಳಲ್ಲಿ ಆಂಬಿಯೆಂಟ್ ಲೈಟಿಂಗ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, 8-ವೇ ಪವರ್-ಅಡ್ಜಸ್ಟಬಲ್ ಡ್ರೈವರ್ ಸೀಟ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ಗಳನ್ನು ಒಳಗೊಂಡಿದೆ.

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಪ್ಲಸ್ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್, ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.