Toyota: ಈ ಟೊಯೊಟಾ ಕಾರಿಗೆ ಫುಲ್ ಡಿಮ್ಯಾಂಡ್.. 9.79 ಲಕ್ಷ ರೂ, 7-ಸೀಟರ್.. 26 Km ಮೈಲೇಜ್

Toyota Rumion: ಈ 2026ರ ಜುಲೈನಲ್ಲಿಯೂ 'ಟೊಯೊಟಾ ರೂಮಿಯನ್' ಎಂಪಿವಿ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ.

Aug 12, 2026 - 14:42
Toyota: ಈ ಟೊಯೊಟಾ ಕಾರಿಗೆ ಫುಲ್ ಡಿಮ್ಯಾಂಡ್.. 9.79 ಲಕ್ಷ ರೂ, 7-ಸೀಟರ್.. 26 Km ಮೈಲೇಜ್

ಟೊಯೊಟಾ ರೂಮಿಯನ್ (Toyota Rumion) ಜನಪ್ರಿಯ ಎಂಪಿವಿಯಾಗಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಈ 2026ರ ಜುಲೈನಲ್ಲಿಯೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 2,632 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 576 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ (YoY) ಶೇಕಡ 356.9% ಬೆಳವಣಿಗೆಯಾಗಿದೆ. 

'ಟೊಯೊಟಾ ರೂಮಿಯನ್' ವಿಶೇಷತೆಗಳೇನು:

ಇದು ರೂ.9.79 ಲಕ್ಷದಿಂದ ರೂ.14.21 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ (E) ಎಸ್ (S), ಜಿ (G) ಹಾಗೂ ವಿ (V) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಎಂಪಿವಿ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪ್ರೊಜೆಕ್ಟರ್‌ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗ‌ಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 15-ಇಂಚಿನ ಅಲಾಯ್ ವೀಲ್‌ಗಳನ್ನು ಪಡೆದಿದೆ. ಎಂಟೈಸಿಂಗ್ ಸಿಲ್ವರ್, ಐಕಾನಿಕ್ ಗ್ರೇ, ರಸ್ಟಿಕ್ ಬ್ರೌನ್, ಸ್ಪಂಕಿ ಬ್ಲೂ ಮತ್ತು ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 209 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ರೂಮಿಯನ್' 'ಮಾರುತಿ ಎರ್ಟಿಗಾ'ದ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, 7 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 209 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ.

ಇದು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.51 ರಿಂದ 26 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 170 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.

ಈ ಎಂಪಿವಿ ಕ್ಯಾಬಿನ್ ವಿನ್ಯಾಸವು ಉತ್ತಮವಾಗಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಕ್ರೂಸ್ ಕಂಟ್ರೋಲ್ ಹಾಗೂ ರೇರ್-ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.