Toyota: 28 Km ಮೈಲೇಜ್.. 11 ಲಕ್ಷ ರೂ, 5-ಸೀಟರ್.. ಈ ಕಾರಿಗೆ ಮನಸೋತ ಗ್ರಾಹಕರು!

Toyota Urban Cruiser Hyryder: ಈ 2026ರ ಜೂನ್ ತಿಂಗಳಲ್ಲಿ 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್' ಎಸ್‌ಯುವಿ ಉತ್ತಮ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Jul 20, 2026 - 15:36
Toyota: 28 Km ಮೈಲೇಜ್.. 11 ಲಕ್ಷ ರೂ, 5-ಸೀಟರ್.. ಈ ಕಾರಿಗೆ ಮನಸೋತ ಗ್ರಾಹಕರು!

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder) ಜನಪ್ರಿಯ ಎಸ್‌ಯುವಿಯಾಗಿದೆ. ಈ 2026ರ ಜೂನ್ ತಿಂಗಳಲ್ಲಿ ಒಟ್ಟು 9,104 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. 2025ರ ಇದೇ ಅವಧಿಯಲ್ಲಿ 7,462 ಯುನಿಟ್‌ಗಳನ್ನು ಮಾರಲಾಗಿದೆ. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 22% ಪ್ರಗತಿಯಾಗಿದೆ. 

ಈ ಕಾರು ರೂ.11.31 ಲಕ್ಷದಿಂದ ರೂ.20.19 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇ, ಎಸ್, ಜಿ ಮತ್ತು ವಿ ಎಂಬ 4 ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು & 17-ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್ ಹಾಗೂ ಕೇವ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಟೊಯೊಟಾ ಹೈರೈಡರ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 

ಈ ಕಾರು  5 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 373 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.