ಟ್ರಾಫಿಕ್ ಕೇಸ್: ದಂಡದಲ್ಲಿ ಶೇ.50 ರಿಯಾಯಿತಿ
Mangaluru: ಸಾರಿಗೆ ಇಲಾಖೆಯಲ್ಲಿ 1991 ರಿಂದ 2025 ರವರೆಗೆ & ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ಘೋಷಿಸಲಾಗಿದೆ.
ಮಂಗಳೂರು: ಸಾರಿಗೆ ಇಲಾಖೆಯಲ್ಲಿ 1991 ರಿಂದ 2025 ರವರೆಗೆ & ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ವ್ಯವಸ್ಥೆಯಲ್ಲಿ ದಾಖಲಾದ ಪ್ರಕರಣಗಳ ದಂಡದ ಮೊತ್ತಕ್ಕೆ ಶೇ.50 ರಷ್ಟು ರಿಯಾಯಿತಿ ಘೋಷಿಸಲಾಗಿದೆ.
ಈ ವಿಶೇಷ ರಿಯಾಯಿತಿಯನ್ನು ಮುಂಬರುವ ರಾಷ್ಟ್ರೀಯ ಲೋಕ ಅದಾಲತ್‍ನ ಅಂಗವಾಗಿ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದೆ. ಅದರಂತೆ, 2026ರ ನವೆಂಬರ್ 21 ರಿಂದ ಡಿಸೆಂಬರ್ 11 ರವರೆಗೆ ಬಾಕಿಯಿರುವ ಅರ್ಹ ಪ್ರಕರಣಗಳಿಗೆ ಮಾತ್ರ ಈ ರಿಯಾಯಿತಿ ಅನ್ವಯವಾಗಲಿದೆ.
ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ದಂಡದ ಮೊತ್ತವನ್ನು ಪಾವತಿಸಲು ಕಾಯುತ್ತಿರುವ ವಾಹನ ಮಾಲೀಕರು ಹಾಗೂ ಚಾಲಕರಿಗೆ ಇದು ಉತ್ತಮ ಅವಕಾಶವಾಗಿದೆ.
ಸಾರ್ವಜನಿಕರು ಈ ವಿಶೇಷ ರಿಯಾಯಿತಿಯ ಸದುಪಯೋಗ ಪಡೆದುಕೊಂಡು, ತಮ್ಮ ವಾಹನಗಳಿಗೆ ಸಂಬಂಧಿಸಿದಂತೆ ಬಾಕಿಯಿರುವ ಅರ್ಹ ಇ-ಚಲನ್ ಪ್ರಕರಣಗಳ ದಂಡವನ್ನು ಶೇ. 50 ರಷ್ಟು ರಿಯಾಯಿತಿಯಲ್ಲಿ ಪಾವತಿಸುವುದರೊಂದಿಗೆ, ಪ್ರಕರಣಗಳನ್ನು ಸುಲಭವಾಗಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.