6 ತಿಂಗಳ ಮತ್ತೆ ಸಂಚಾರ ಆರಂಭಿಸಿದ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು

Dec 16, 2025 - 22:31
6 ತಿಂಗಳ ಮತ್ತೆ ಸಂಚಾರ ಆರಂಭಿಸಿದ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು
6 ತಿಂಗಳ ಮತ್ತೆ ಸಂಚಾರ ಆರಂಭಿಸಿದ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು

ಬೆಂಗಳೂರಿನಿಂದ ಕರಾವಳಿಗೆ ಹೋಗುವ ರೈಲುವೇ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೈಋತ್ಯ ರೈಲ್ವೆ ಇಲಾಖೆ ನೀಡಿದೆ. ಹಾಗೂ ಇದು ಧರ್ಮಸ್ಥಳ, ಕುಕ್ಕೆ- ಶ್ರವಣಬೆಳಗೊಳ ಸೇರಿದಂತೆ ಹಲವು ಪುಣ್ಯ  ಕ್ಷೇತ್ರಕ್ಕೆ  ಹೋಗುವವರಿಗೆ ಇದು ಸಹಾಯವಾಗಲಿದೆ. ಆರು ತಿಂಗಳ ಹಿಂದೆ ರದ್ದಾಗಿದ್ದ ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆ ಪುನಾರಂಭಗೊಳಿಸಲು ನಿರ್ಧರಿಸಲಾಗಿದೆ. ಇದೀಗ ಈ ಬಗ್ಗೆ ರೈಲ್ವೆ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಬೆಂಗಳೂರು-ಮಂಗಳೂರು-ಕಾರವಾರ ರೈಲು ಸೇವೆಯಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ. ಈ ಮೂಲಕ ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲು (16575/16576) ಮತ್ತೆ ತನ್ನ ಸೇವೆ ಮುಂದುವರಿಸಲಿದೆ. ಇದೀಗ ಮೊದಲಿನಂತೆ ತನ್ನ ಸಂಚಾರವನ್ನು ಯಶವಂತಪುರ ನಿಲ್ದಾಣದಿಂದ ಆರಂಭಿಸಲಿದೆ. ಪ್ರಯಾಣಿಕರು ಈ ರೈಲ್ವೆ ಸಂಚಾರ ಸೇವೆಯನ್ನು ಸದುಪಯೋಗ ಮಾಡಿಕೊಳ್ಳುವಂತೆ ರೈಲ್ವೆ ಇಲಾಖೆ ಹೇಳಿದೆ.

ಕಳೆದ ಆರು ತಿಂಗಳಿನಿಂದ ರದ್ದಾಗಿದ್ದ ಈ ರೈಲು, ಇದೀಗ ಮತ್ತೆ ಪ್ರಾರಂಭವಾಗಿರುವುದು ಪ್ರಯಾಣಿಕರಲ್ಲಿ ಸಂಸತ ತಂದಿದೆ. ಹಾಸನ, ಸಕಲೇಶಪುರ ಮಾರ್ಗದಲ್ಲಿ ವಿದ್ಯುದೀಕರಣ ಮತ್ತು ಇತರ ಕಾಮಗಾರಿಗಳ ಕಾರಣದಿಂದಾಗಿ ಈ ರೈಲು ರದ್ದಾಗಿತ್ತು. ಇದೀಗ ಮತ್ತೆ ಸಂಚಾರಿಸುವ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲು ಸಿದ್ಧವಾಗಿದೆ. ಈ ಮೂಲಕ ನೈಋತ್ಯ ರೈಲ್ವೆ ಕರಾವಳಿ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಮಯ

ಗೊಮ್ಮಟೇಶ್ವರ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಮಯದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಕೊಂಡಿಲ್ಲ. ಸಂಚಾರ ಮಾರ್ಗದಲ್ಲೂ ಯಾವುದೇ ಬದಲಾವಣೆಯನ್ನು ಮಾಡಿಕೊಂಡಿಲ್ಲ, ಆದರೆ ನಿಲ್ದಾಣದಲ್ಲಿ ನಿಲ್ಲುವ ಸಮಯದಲ್ಲಿ ಬದಲಾವಣೆಯನ್ನು ಮಾಡಿಕೊಂಡಿದೆ. ಯಶವಂತಪುರ ನಿಲ್ದಾಣದಿಂದ ಹೊರಟು ಚಿಕ್ಕಬಾಣಾವರ, ಹಾಸನ, ಶ್ರವಣಬೆಳಗೊಳ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ, ಕಬಕಪುತ್ತೂರು, ಬಂಟ್ವಾಳ ಮೂಲಕ ಮಂಗಳೂರಿಗೆ ಹೋಗುತ್ತದೆ. ಅಲ್ಲಿಂದ ಶ್ರವಣಬೆಳಗೊಳ ನಿಲ್ದಾಣದಲ್ಲಿ ನಿಲ್ಲುತ್ತದೆ. ರೈಲು ಹಾಸನ ಮತ್ತು ಸಕಲೇಶಪುರದಲ್ಲಿ ಹೆಚ್ಚು ಸಮಯ ನಿಲ್ಲುತ್ತದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.