Tumakuru Square: 7 ಕೋಟಿ ವೆಚ್ಚದ 'ತುಮಕೂರು ಸ್ಕ್ವೇರ್' ಲೋಕಾರ್ಪಣೆ

Tumakuru Square: 'ತುಮಕೂರು ಸ್ಕ್ವೇರ್'ನ್ನು ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು.

Nov 15, 2026 - 11:00
Nov 14, 2026 - 21:59
Tumakuru Square: 7 ಕೋಟಿ ವೆಚ್ಚದ 'ತುಮಕೂರು ಸ್ಕ್ವೇರ್' ಲೋಕಾರ್ಪಣೆ

ತುಮಕೂರು: ಇಲ್ಲಿನ ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ವೃತ್ತದಲ್ಲಿ ಅಂದಾಜು ರೂ.7 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ 'ತುಮಕೂರು ಸ್ಕ್ವೇರ್' ಬೃಹತ್ ಎಲ್‌ಇಡಿ ಪರದೆಯನ್ನು ಸಿದ್ಧಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಶನಿವಾರ ಲೋಕಾರ್ಪಣೆಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಉಮೇಶ್ ಹಾಗೂ ಜಿಲ್ಲಾ ಗ್ಯಾರಂಟಿ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಶೇಖರ್‌ಗೌಡ ಅವರು, ಸೇರಿದಂತೆ ಇತರರು ಉಪಸ್ಥಿತರಿದ್ದರು.

ಹೊಸ ಇತಿಹಾಸ ಸೃಷ್ಟಿ: ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ ಹೆಸರಿನ ವೃತ್ತದಲ್ಲಿ ವಿನೂತನ ಎಲೆಕ್ಟ್ರಾನಿಕ್ ಪರದೆ ವ್ಯವಸ್ಥೆಯನ್ನು ನಿರ್ಮಿಸಿರುವುದು ತುಮಕೂರು ನಗರದ ಜನತೆಗೆ ನೀಡಿರುವ ಕೊಡುಗೆಯಾಗಿದೆ. ಇಂತಹ ಬೃಹತ್ ಡಿಜಿಟಲ್ ಪರದೆ ವ್ಯವಸ್ಥೆ ದೇಶದ ಯಾವುದೇ ಜಿಲ್ಲಾ ಕೇಂದ್ರದಲ್ಲಿ ಇಲ್ಲ ಎಂಬುದು ಗಮನಾರ್ಹ. ಈ ಮೂಲಕ ತುಮಕೂರು ಹೊಸ ಇತಿಹಾಸ ಸೃಷ್ಟಿಸಿದೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.