TVS Jupiter: ಟಿವಿಎಸ್ ಜುಪಿಟರ್' ಸ್ಕೂಟರ್‌ಗೆ ಮುಗಿಬಿದ್ದ ಜನ.. ಏನಿದರ ವಿಶೇಷತೆಗಳು?

TVS Jupiter: ಟಿವಿಎಸ್ ಜುಪಿಟರ್ ಸ್ಕೂಟರ್ ಈ 2026ರ ಜೂನ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

Jul 27, 2026 - 18:01
TVS Jupiter: ಟಿವಿಎಸ್ ಜುಪಿಟರ್' ಸ್ಕೂಟರ್‌ಗೆ ಮುಗಿಬಿದ್ದ ಜನ.. ಏನಿದರ ವಿಶೇಷತೆಗಳು?

ಟಿವಿಎಸ್ ಜುಪಿಟರ್ (TVS Jupiter) ಜನಪ್ರಿಯ ಫ್ಯಾಮಿಲಿ ಸ್ಕೂಟರ್ ಎಂದೇ ಹೆಸರುವಾಗಿದೆ. ಗ್ರಾಹಕರು ಕೂಡ ಮನಸೊತ್ತಿದ್ದಾರೆ. ಈ 2026ರ ಜೂನ್ ತಿಂಗಳಲ್ಲೂ ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,36,805 ಯುನಿಟ್‌ಗಳನ್ನು ವಿತರಿಸಲಾಗಿದೆ. 2025ರ ಇದೇ ಅವಧಿಯಲ್ಲಿ 107,980 ಯುನಿಟ್‌ಗಳನ್ನು ಮಾರಲಾಗಿತ್ತು. ಇದರೊಂದಿಗೆ ವರ್ಷದಿಂದ ವರ್ಷಕ್ಕೆ ಶೇಕಡ 26.69% ಬೆಳವಣಿಗೆ ಸಾಧಿಸಲಾಗಿದೆ. ಇದು ಜುಪಿಟರ್ 110 ಮತ್ತು ಜುಪಿಟರ್ 125 ಎಂಬ ಎರಡು ವಿಧದಲ್ಲಿ ಖರೀದಿಗೆ ಲಭ್ಯವಿದೆ.

ಟಿವಿಎಸ್ ಜುಪಿಟರ್ 125 (TVS Jupiter 125) ವಿಶೇಷತೆಗಳೇನು:

ಈ ಸ್ಕೂಟರ್ ರೂ.86,605 ರಿಂದ ರೂ.87,640 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್, ಡಿಸ್ಕ್, ಡಿಟಿ ಎಸ್ಎಕ್ಸ್‌ಸಿ ಮತ್ತು ಸ್ಮಾರ್ಟ್‌ಕನೆಕ್ಟ್ ( ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಇಂಡಿಬ್ಲೂ, ಟೈಟಾನಿಯಂ ಗ್ರೇ, ಪ್ರಿಸ್ಟೈನ್ ವೈಟ್, ಡಾನ್ ಆರೆಂಜ್ & ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 

ನೂತನ 'ಜುಪಿಟರ್ 125' ಸ್ಕೂಟರ್ 124.8-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 

ಇದು ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ ಮತ್ತು ಎಲೆಕ್ಟ್ರಿಕ್ ಸೈಲಂಟ್ ಸ್ಟಾರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಟಿವಿಎಸ್ ಜುಪಿಟರ್ 110 (TVS Jupiter 110) ಹೇಗಿದೆ:

ಈ ಸ್ಕೂಟರ್ ರೂ.73,975 ರಿಂದ ರೂ.88,850 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್ಎಕ್ಸ್‌ಸಿ, ಡಿಸ್ಕ್ ಎಸ್ಎಕ್ಸ್‌ಸಿ ಮತ್ತು ಸ್ಪೆಷಲ್ ಎಡಿಷನ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ.  ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್, ಮೆಟಿಯರ್ ರೆಡ್ ಗ್ಲಾಸ್, ಸ್ಟಾರ್‌ಲೈಟ್ ಬ್ಲೂ ಗ್ಲಾಸ್ ಮತ್ತು ಸ್ಟಾರ್‌ಡಸ್ಟ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

ಹೊಸ 'ಜುಪಿಟರ್ 110' ಸ್ಕೂಟರ್ 113-ಸಿಸಿ ಸಿಂಗಲ್-ಸಿಲಿಂಡರ್ 4-ಸ್ಟ್ರೋಕ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5.1 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 

ಇದು ಪುಲ್-ಡಿಜಿಟಲ್ ಕಲರ್  ಇನ್ಸ್ಟ್ರುಮೆಂಟ್ ಕನ್ಸೋಲ್‌, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಂಜಿನ್ ಕಿಲ್ ಸ್ವಿಚ್, ಐಗೋ ಅಸಿಸ್ಟ್‌ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸವಾರರ ರಕ್ಷಣೆಗಾಗಿ  ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.  

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.