ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಪತ್ತೆ, ಪೊಲೀಸರ ವಶಕ್ಕೆ

Mangaluru: ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಪತ್ತೆಯಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

Nov 14, 2026 - 14:44
Nov 14, 2026 - 14:45
ಮಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳ ಪತ್ತೆ, ಪೊಲೀಸರ ವಶಕ್ಕೆ

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆ ಹಚ್ಚಿ, ವಶಕ್ಕೆ ಪಡೆದಿದ್ದಾರೆ.   

ಪಣಂಬೂರು ಬೀಚ್ ಸಮೀಪದ ರೆಸ್ಟೋರೆಂಟ್‌ವೊಂದರಲ್ಲಿ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳು ಅಕ್ರಮವಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. 

ರೆಸ್ಟೋರೆಂಟ್‌ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಲ್ಲಿ ಕೆಲಸ ಮಾಡುತ್ತಿದ್ದ ಅಶಿಕುಲ್ ಇಸ್ಲಾಂ ಮತ್ತು ಎಂಡಿ ಅಮೀನ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಇಬ್ಬರೂ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ, ಭಾರತದಲ್ಲಿ ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ. ಅವರನ್ನು ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರಿಸಲಾಗಿದೆ. ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.

ಪಣಂಬೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಲೀಂ ಅಬ್ಬಾಸ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್ಐಗಳಾದ ಶ್ರೀಕಲಾ ಕೆ.ಟಿ, ಜ್ಞಾನಶೇಖರ & ಸಿಬ್ಬಂದಿಗಳಾದ ಇಮ್ತಿಯಾಝ್, ಫಕ್ಕಿರೇಶ್ ಹಾಗೂ ರಾಕೇಶ್ ಎಲ್.ಎಂ ಭಾಗವಹಿಸಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.