ಜೈಮಿನಿಗುಡ್ಡೆಯಲ್ಲಿ ಅ.31 ರಿಂದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ

Jaiminigudde: ಜೈಮಿನಿಗುಡ್ಡೆಯಲ್ಲಿ ಅ.31 ರಿಂದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ.

Oct 23, 2026 - 11:15
Oct 23, 2026 - 11:54
ಜೈಮಿನಿಗುಡ್ಡೆಯಲ್ಲಿ ಅ.31 ರಿಂದ ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿ

ಪುತ್ತೂರು: ಕ್ರೀಡಾಸಕ್ತ ಯುವ ಜನರನ್ನು ಒಂದೆಡೆ ಸೇರಿಸಿ, ಕ್ರೀಡಾ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಜೈಮಿನಿಗುಡ್ಡೆಯ ಶ್ರೀವಿಷ್ಣು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ವತಿಯಿಂದ, ಅ.31 ಮತ್ತು ನ.1 ರಂದು ಎರಡು ದಿನಗಳ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ.

ಸ್ಥಳೀಯ ಕ್ರೀಡಾಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸುವುದರೊಂದಿಗೆ, ಯುವಜನರಲ್ಲಿ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಈ ಪಂದ್ಯಾವಳಿಯು ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಕ್ರಿಕೆಟ್ ಅಭಿಮಾನಿಗಳು ಮತ್ತು ಕ್ರೀಡಾಸಕ್ತರ ಸಹಭಾಗಿತ್ವದಲ್ಲಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಲು ಸಂಘಟಕರು ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಗಳಿಸುವ ತಂಡಕ್ಕೆ ರೂ.10,010 ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿ ನೀಡಿ ಗೌರವಿಸಲಾಗುವುದು. ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ.5,555 ನಗದು ಬಹುಮಾನ ಮತ್ತು ಟ್ರೋಫಿ ಬಹುಮಾನವಾಗಿ ನೀಡಲಾಗುತ್ತದೆ.

ಪಂದ್ಯಾವಳಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಕ್ರಿಕೆಟ್ ತಂಡಗಳು ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ನೋಂದಣಿ ಪ್ರಕ್ರಿಯೆ ಸಂಬಂಧ, ಹೆಚ್ಚಿನ ಮಾಹಿತಿಗಾಗಿ 77609 30417, 9591060366 ಹಾಗೂ 9845240945 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು.

ಇನ್ನು, ಜೈಮಿನಿಗುಡ್ಡೆಯಲ್ಲಿ ಜರುಗುವ ಕ್ರಿಕೆಟ್ ಪಂದ್ಯಾವಳಿಗೆ ಕ್ರೀಡಾಪಟುಗಳು ಹಾಗೂ ಕ್ರಿಕೆಟ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಯಶಸ್ವಿಗೊಳಿಸಬೇಕೆಂದು ಶ್ರೀವಿಷ್ಣು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಜೈಮಿನಿಗುಡ್ಡೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಸದಸ್ಯರು ಕೋರಿದ್ದಾರೆ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.