ಉಡುಪಿ: ಉದ್ಯಮಿ ಹತ್ಯೆ.. ಆರೋಪಿ ಬಂಧನ

Udupi: ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ ಸಂಬಂಧ, ಉತ್ತರ ಪ್ರದೇಶ ಮೂಲದ ರಾಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Aug 8, 2026 - 18:38
ಉಡುಪಿ: ಉದ್ಯಮಿ ಹತ್ಯೆ.. ಆರೋಪಿ ಬಂಧನ

ಉಡುಪಿ: ಉದ್ಯಮಿ ಹಾಗೂ ಸ್ಥಳೀಯ ಕಾಂಗ್ರೆಸ್‌ ಮುಖಂಡ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ ಸಂಬಂಧ, ಉತ್ತರ ಪ್ರದೇಶ ಮೂಲದ ರಾಜು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. 

ಈ ಘಟನೆ ನಂತರ, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದರು. ಬೈಂದೂರು ತಾಲೂಕಿನ ಒತ್ತಿನೆಣೆ ಬಳಿ, ನಿರ್ಜನ ಪ್ರದೇಶದಲ್ಲಿ ಮೂವರು ಆರೋಪಿಗಳು ಅವಿತುಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. 

ಕಾಪು ಪಿಎಸ್‌ಐ ತೇಜಸ್ವಿ ನೇತೃತ್ವದ ತಂಡವು ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದಾಗ, ಬೈಂದೂರು ಸಮೀಪ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ತೇಜಸ್ವಿ ಅವರು ತಮ್ಮ ಸರ್ವೀಸ್‌ ಪಿಸ್ತೂಲಿನಿಂದ ಆರೋಪಿ ರಾಜು ಕಾಲಿಗೆ ಗುಂಡು ಹಾರಿದ್ದಾರೆ. ಉಳಿದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸದ್ಯ, ಅವರಿಗಾಗಿ ಹುಡುಕಾಟ ನಡೆಯುತ್ತಿದೆ. 

ಗಾಯಗೊಂಡಿದ್ದ ಪಿಎಸ್‌ಐ ತೇಜಸ್ವಿ ಹಾಗೂ ಆರೋಪಿ ರಾಜುನನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.