Dharmendra Pradhan: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

Dharmendra Pradhan: ಕಾಕ್ರೋಚ್‌ ಜನತಾ ಪಾರ್ಟಿ ಒತ್ತಡಕ್ಕೆ ಮಣಿದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Jul 25, 2026 - 15:21
Jul 25, 2026 - 15:34
Dharmendra Pradhan: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ನವದೆಹಲಿ: ಕಾಕ್ರೋಚ್‌ ಜನತಾ ಪಾರ್ಟಿ ಒತ್ತಡಕ್ಕೆ ಮಣಿದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ. 

2026ರ ನೀಟ್‌-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಈ ಹಿನ್ನೆಲೆ, ಅವರ ತಲೆದಂಡವಾಗಿದೆ.

ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ 'ಜಂತರ್ ಮಂತರ್‌'ನಲ್ಲಿ ಹೋರಾಟಗಾರರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು ಹಿಡಿದು ಮುಷ್ಕರ ನಡೆಸುತ್ತಿದ್ದರು. 

ಈ ಬಗ್ಗೆ 'ಎಕ್ಸ್'ನಲ್ಲಿ ಧರ್ಮೇಂದ್ರ ಪ್ರಧಾನ್ ಪೋಸ್ಟ್ ಮಾಡಿದ್ದಾರೆ. 'ಈ ವಿಚಾರದಲ್ಲಿ ರಾಷ್ಟ್ರ ವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸುವುದನ್ನು ತಡೆಯಲು, ನಾನು ರಾಜೀನಾಮೆ ತೀರ್ಮಾನವನ್ನು ತೆಗೆದುಕೊಂಡಿದ್ದೇನೆ. ದೇಶದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ' ಎಂದು ಬರೆದುಕೊಂಡಿದ್ದಾರೆ.

ಮೇ 3 ರಂದು ನಡೆದ ನೀಟ್‌ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿದ್ದವು. ಆ ಬಳಿಕ, ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯನ್ನು ನಡೆಸಿ ಜುಲೈ 16 ರಂದು ಫಲಿತಾಂಶವನ್ನು ಪ್ರಕಟಿಸಿತ್ತು. ಮುಂದಿನ ವರ್ಷದಿಂದ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.