ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಕಲೋತ್ಸವ-2026 ಆಯೋಜನೆ

Uppinangadi: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಈಚೆಗೆ ಕಲೋತ್ಸವ-2026 ಸಾಂಸ್ಕೃತಿಕ ಕಲರವ ಕಾರ್ಯಕ್ರಮ ನಡೆಯಿತು.

Nov 21, 2026 - 15:52
Nov 21, 2026 - 15:52
ಉಪ್ಪಿನಂಗಡಿ: ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಕಲೋತ್ಸವ-2026 ಆಯೋಜನೆ

ಉಪ್ಪಿನಂಗಡಿ: ಶಿಕ್ಷಣವೆಂದರೆ ಕೇವಲ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಿಕ್ಷಕರ ಪಾಠ ಕೇಳುವುದಷ್ಟೇ ಅಲ್ಲ. ಕಲಿಕೆಯ ಜೊತೆಗೆ ಜೀವನಕ್ಕೆ ಪೂರಕವಾಗುವ ಕಲೆಗಳನ್ನು ಮೈಗೂಡಿಸಿಕೊಳ್ಳಬೇಕು. ಕಲೆಗಳು ಜೀವನದಲ್ಲಿ ಸುಂದರ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗುತ್ತವೆ ಎಂದು ಖ್ಯಾತ ಮದ್ದಳೆ ವಾದಕ ಲಕ್ಷ್ಮೀಶ ಅಮ್ಮಣ್ಣಾಯ ಹೇಳಿದರು. 

ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಈಚೆಗೆ ನಡೆದ ಕಲೋತ್ಸವ-2026 ಸಾಂಸ್ಕೃತಿಕ ಕಲರವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. 

ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಬಾಲಕೃಷ್ಣ ಭಟ್ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ವಿದ್ಯಾಸಂಸ್ಥೆಯ ಸಂಚಾಲಕ ಸುಬ್ರಹ್ಮಣ್ಯ ಭಟ್, ಆಡಳಿತ ಮಂಡಳಿ ಸದಸ್ಯರಾದ ರವಿ ಇಳಂತಿಲ ಮತ್ತು ಅನುಷಾ ಅಮ್ಮಣ್ಣಾಯ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಾಲಾ ಶಿಕ್ಷಿಕಿ ವೀಣಾ ಆರ್ ಪ್ರಸಾದ್ ಸ್ವಾಗತಿಸಿದರು. ಸಹಶಿಕ್ಷಕಿಯರಾದ ರಶ್ಮಿತಾ ಹಾಗೂ ದೀಕ್ಷಿತಾ ಎಸ್.ಟಿ ಕಾರ್ಯಕ್ರಮವನ್ನು ನಿರೂಪಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.