ಉಪ್ಪಿನಂಗಡಿ: ಮಾಂಡೋವಿ ಮೋಟಾರ್ಸ್‌ನಲ್ಲಿ ನೂತನ 'ಮಾರುತಿ ಬ್ರೆಝಾ' ಅದ್ಧೂರಿ ಬಿಡುಗಡೆ
Maruti Suzuki Brezza Facelift: ಉಪ್ಪಿನಂಗಡಿಯ 'ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಅತ್ಯಾಧುನಿಕ ವೈಶಿಷ್ಟ್ಯಗಳ ನೂತನ 2026ರ 'ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್' ಎಸ್‌ಯುವಿಯ ಬಿಡುಗಡೆ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಉಪ್ಪಿನಂಗಡಿ: ಇಲ್ಲಿನ 'ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಅತ್ಯಾಧುನಿಕ ವೈಶಿಷ್ಟ್ಯಗಳ ನೂತನ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್ (Maruti Suzuki Brezza Facelift) ಎಸ್‌ಯುವಿಯ ಬಿಡುಗಡೆ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ಪದ್ಮ ವಿದ್ಯಾ ಸಂಸ್ಥೆಗಳ ವಿದ್ಯಾಧರ ಜೈನ್, ಪುತ್ತೂರಿನ ವಕೀಲ ರತನ್ ಕುಮಾರ್ ರೈ ಮತ್ತು ಸ್ಥಳೀಯ ಪಂಚಾಯಿತಿ ಸದಸ್ಯ ಚಂದ್ರಶೇಖರ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಅವರುಗಳು ಜಂಟಿಯಾಗಿ ಹೊಸ ಕಾರನ್ನು ಅನಾವರಣಗೊಳಿಸಿದರು.
ಆ ಬಳಿಕ ಮಾತನಾಡಿದ ಅತಿಥಿಗಳು, ಮಾಂಡೋವಿ ಮೋಟಾರ್ಸ್ ಸಂಸ್ಥೆಯ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿ, ನೂತನ ಮಾಡೆಲ್ ಗ್ರಾಹಕರಿಗೆ ಅತ್ಯುತ್ತಮ ಚಾಲನಾ ಅನುಭವ ನೀಡಲಿ ಎಂದು ಶುಭ ಹಾರೈಸಿದರು.

ನೂತನ ಎಸ್‌ಯುವಿ ಬಿಡುಗಡೆ ನಂತರ, ಸಂಸ್ಥೆಯ ರೂರಲ್ ಹೆಡ್ ಸುಜಿತ್ ಕುಮಾರ್, ಅದರ ವಿನ್ಯಾಸ ಹಾಗೂ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಿದರು. ಜನರಲ್ ಮ್ಯಾನೇಜರ್ (ಸೇಲ್ಸ್) ಶಶಿಧರ್ ಕಾರಂತ್, ಹೊಸ ಕಾರಿನಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನ, ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳು ಮತ್ತು ಮೈಲೇಜ್ ಕುರಿತು ಗ್ರಾಹಕರಿಗೆ ಸವಿಸ್ತಾರವಾಗಿ ವಿವರಿಸಿದರು.
ಈ ವೇಳೆ ಉಪ್ಪಿನಂಗಡಿ ಭಾಗದ ಪ್ರಮುಖ ಗಣ್ಯರು, ವಾಹನ ಪ್ರೇಮಿಗಳು, ಮಾಂಡೋವಿ ಮೋಟಾರ್ಸ್ ಸಂಸ್ಥೆಯ ಅಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಹಾಜರಿದ್ದರು.
'ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್' ವಿಶೇಷತೆಗಳೇನು:
ಇದು ರೂ.7.40 ಲಕ್ಷದಿಂದ ರೂ.13.71 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಎಲ್ಎಕ್ಸ್ಐ, ವಿಎಕ್ಸ್ಐ, ಜಡ್ಎಕ್ಸ್ಐ ಮತ್ತು ಜಡ್ಎಕ್ಸ್ಐ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ 'ಮಾರುತಿ ಬ್ರೆಝಾ' ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ನವೀನವಾದ ಗ್ರಿಲ್ ಹಾಗೂ ಬಂಪರ್‌ನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು & ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ತ್ರೈಅಂಗುಲರ್ ಎಲ್ಇಡಿ ಫಾಗ್ ಲ್ಯಾಂಪ್‌ಗಳು ಮತ್ತು ಸಿಲ್ವರ್ ರೂಫ್ ರೈಲ್ ಗಳನ್ನು ಒಳಗೊಂಡಿದೆ. 16-ಇಂಚಿನ ಅಲಾಯ್ ವೀಲ್‌ಗಳನ್ನು ತನ್ನದಾಗಿಸಿಕೊಂಡಿದೆ.
ಈ ಕಾರು ಪರ್ಲ್ ಆರ್ಕ್ಟಿಕ್ ವೈಟ್, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ಹಲವು ಬಣ್ಣಗಳೊಂದಿಗೂ ದೊರೆಯುತ್ತದೆ. ಒಳಭಾಗದ ಕ್ಯಾಬಿನ್ ವಿನ್ಯಾಸವು ಅತ್ಯುತ್ತಮವಾಗಿದೆ. 5 ಆಸನಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು ಕೊಂಡೊಯ್ಯಲು 328 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.
ಇದು ಹೆಚ್ಚು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್), 1-ಲೀಟರ್ ಟರ್ಬೊ ಪೆಟ್ರೋಲ್ (ಮೈಲ್ಡ್ ಹೈಬ್ರಿಡ್) ಮತ್ತು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ + ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19.96 ರಿಂದ 26.90 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ.
ನೂತನ 'ಬ್ರೆಝಾ' ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 64-ಕಲರ್ ಆಂಬಿಯೆಂಟ್ ಲೈಟಿಂಗ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ 6-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ನ್ನು ಪಡೆದಿದೆ.
ಈ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದ್ದು, ಭಾರತ್ ಎನ್‌ಸಿಎಪಿ (Bharat NCAP) 5-ಸ್ಟಾರ್ ಸೇಫ್ಟಿ ರೇಟಿಂಗ್ ನೀಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಫ್ರಂಟ್-ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.