US Open-2026: ಯುಎಸ್ ಓಪನ್ ಗೆದ್ದ ಅಲೆಕ್ಸಾಂಡರ್ ಜ್ವೆರೆವ್.. ರೂ.52.5 ಕೋಟಿ ಬಹುಮಾನ

US Open-2026: ನ್ಯೂಯಾರ್ಕ್‌ನಲ್ಲಿ ನಡೆದ 'ಯುಎಸ್ ಓಪನ್ ಫೈನಲ್‌'ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್, ಅಮೆರಿಕದ ಬೆನ್ ಶೆಲ್ಟನ್ ವಿರುದ್ಧ ಜಯಗಳಿಸಿದ್ದಾರೆ.

Sep 15, 2026 - 15:40
US Open-2026: ಯುಎಸ್ ಓಪನ್ ಗೆದ್ದ ಅಲೆಕ್ಸಾಂಡರ್ ಜ್ವೆರೆವ್.. ರೂ.52.5 ಕೋಟಿ ಬಹುಮಾನ

US Open-2026: ನ್ಯೂಯಾರ್ಕ್‌ನಲ್ಲಿ ನಡೆದ 'ಯುಎಸ್ ಓಪನ್ ಫೈನಲ್‌'ನಲ್ಲಿ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್, ಅಮೆರಿಕದ ಬೆನ್ ಶೆಲ್ಟನ್ ವಿರುದ್ಧ ಜಯಗಳಿಸಿದ್ದಾರೆ. ಈ ಮೂಲಕ ಚೊಚ್ಚಲ ಬಾರಿಗೆ ಪುರುಷರ ಸಿಂಗಲ್ಸ್‌ನಲ್ಲಿ ಯುಎಸ್ ಓಪನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. 

ಅಲೆಕ್ಸಾಂಡರ್ ಜ್ವೆರೆವ್ 6-3, 7-6 (2), 5-7, 6-2 ಸೆಟ್‌ಗಳ ಅಂತರದಲ್ಲಿ ಬೆನ್ ಶೆಲ್ಟನ್ ಅವರನ್ನು ಸೋಲಿಸಿದ್ದಾರೆ. ಇದರೊಂದಿಗೆ ಅವರು, 5.5 ಮಿಲಿಯನ್ ಡಾಲರ್ (ರೂ.52.5 ಕೋಟಿ) ಬಹುಮಾನ ಮೊತ್ತವನ್ನು ಪಡೆದಿದ್ದಾರೆ. 

ಈ ಮೊದಲು ಇದೇ ವರ್ಷದ ಜೂನ್ ತಿಂಗಳಲ್ಲಿ ಫ್ರೆಂಚ್ ಓಪನ್ ಜಯಿಸಿದ್ದ ಜ್ವೆರೆವ್, ಸದ್ಯ ತಮ್ಮ 2ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.