ಉತ್ತರಾಖಂಡ: ಬಸ್ ಕಂದಕಕ್ಕೆ ಉರುಳಿ 6 ಸಾವು, 20 ಜನರಿಗೆ ಗಾಯ
Uttarakhand: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಪ್ರಯಾಣಿಕರ ಬಸ್‌ವೊಂದು 100 ಮೀಟರ್ ಆಳವಾದ ಕಂದಕಕ್ಕೆ ಉರುಳಿಬಿದ್ದಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ತೆಹ್ರಿ ಗರ್ವಾಲ್: ಉತ್ತರಾಖಂಡದ ತೆಹ್ರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಪ್ರಯಾಣಿಕರ ಬಸ್‌ವೊಂದು 100 ಮೀಟರ್ ಆಳವಾದ ಕಂದಕಕ್ಕೆ ಉರುಳಿಬಿದ್ದಿದ್ದು, ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಅಪಘಾತ ನಡೆದಾಗ ಈ ಬಸ್‌ನಲ್ಲಿ ಸುಮಾರು 30 ರಿಂದ 35 ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ.
ಅಪಘಾತದ ಮಾಹಿತಿ ತಿಳಿದ ಕೂಡಲೇ, ರಕ್ಷಣಾ ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಕಂದಕದಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳಾಂತರಿಸಲು ಮುಂದಾದರು. ಸುಮಾರು 20 ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗಳಿಗೆ ಸಾಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಲಾರ್ ಬಜಾರ್ ಸಮೀಪ ಬಸ್ ಆಳವಾದ ಕಂದರಕ್ಕೆ ಬಿದ್ದಿದ್ದು, ಬ್ಯಾಸಿ ಮತ್ತು ಧಲ್ವಾಲಾದಲ್ಲಿರುವ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ನಿಯೋಜಿಸಲಾಗಿದ್ದು, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.
ತೆಹ್ರಿ ಜಿಲ್ಲಾಧಿಕಾರಿ ನಿತಿಕಾ ಖಂಡೇಲ್ವಾಲ್ ಮತ್ತು ಎಸ್‌ಪಿ ಶ್ವೇತಾ ಚೌಬೆ ಸೇರಿದಂತೆ ಹಿರಿಯ ಅಧಿಕಾರಿಗಳು ಅಪಘಾತದ ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.