ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು

Dec 31, 2025 - 13:56
ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ ಭಾರತ್ ರೈಲಿನ ತಾಂತ್ರಿಕ ವೈಶಿಷ್ಟ್ಯವನ್ನು ಪ್ರದರ್ಶಿಸುತ್ತಿದೆ” ಎಂದು ಅಶ್ವಿನಿ ವೈಷ್ಣವ್ ಎಕ್ಸ್​ನಲ್ಲಿ ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ವಂದೇ ಭಾರತ್ ಸ್ಲೀಪರ್ ರೈಲುಗಳು ಶೀಘ್ರದಲ್ಲೇ ಎಸಿ ದರ್ಜೆಯ ಪ್ರಯಾಣಿಕರಿಗಾಗಿ ಕಾರ್ಯಾಚರಣೆಗೆ ಸಿದ್ಧವಾಗಲಿವೆ. ಇದು ದೀರ್ಘ ಪ್ರಯಾಣದ ಸಮಯವನ್ನು ಇನ್ನಷ್ಟು ಅನುಕೂಲಕರವಾಗಿಸುತ್ತದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. ರೈಲ್ವೆ ಸುರಕ್ಷತಾ ಆಯುಕ್ತರ ಕಣ್ಗಾವಲಿನಲ್ಲಿ ನಡೆದ ಈ ಪರೀಕ್ಷಾರ್ಥ ಓಟವು ಕೋಟಾ-ನಾಗ್ಡಾ ರೈಲ್ವೆ ವಿಭಾಗದಲ್ಲಿ ಸಂಚಲನ ಮೂಡಿಸಿದೆ. ಗಂಟೆಗೆ 180 ಕಿ.ಮೀ ವೇಗದಲ್ಲಿ ಈ 'ಮೇಡ್ ಇನ್ ಇಂಡಿಯಾ' ಸ್ಲೀಪರ್ ರೈಲು ಓಡಿ ತನ್ನ ಸಾಮರ್ಥ್ಯವನ್ನು ತೋರಿಸಿದೆ. ಈ ಹೊಸ ಪೀಳಿಗೆಯ ರೈಲಿನ ಮುಂದುವರಿದ ತಾಂತ್ರಿಕ ವೈಶಿಷ್ಟ್ಯಗಳು ಜಾಗತಿಕ ಮಟ್ಟದ ರೈಲುಗಳಿಗೆ ಪೈಪೋಟಿ ನೀಡುವಂತಿವೆ.  ವಂದೇ ಭಾರತ್ ಸ್ಲೀಪರ್ ರೈಲಿನ ಈ ಅದ್ಭುತ ಯಶಸ್ಸಿನ ನಂತರ, ರೈಲು ಶೀಘ್ರದಲ್ಲೇ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ. ಈಗಿರುವ ಹಂತ ಹಂತದ ಪರೀಕ್ಷೆಗಳು ಬಹುತೇಕ ಪೂರ್ಣಗೊಂಡಿದ್ದು, ಮೊದಲ ಹಂತದಲ್ಲಿ ಪ್ರಮುಖ ನಗರಗಳ ನಡುವೆ ಈ ಸ್ಲೀಪರ್ ರೈಲು ಓಡಲಿದೆ. ನಿದ್ರಿಸುತ್ತಾ ಹೋದರೆ ಕಣ್ಣು ಬಿಡುವಷ್ಟರಲ್ಲಿ ಗಮ್ಯಸ್ಥಾನ ತಲುಪಿಸುವ ಈ ರೈಲಿಗಾಗಿ ದೇಶದ ಕೋಟ್ಯಂತರ ಜನರು ಕಾತರದಿಂದ ಕಾಯುತ್ತಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.